1-9 ಕ್ಲಾಸ್ ವರೆಗೆ ಮಹಾರಾಷ್ಟ್ರದಂತೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುತ್ತಾ.? - BC Suddi
1-9 ಕ್ಲಾಸ್ ವರೆಗೆ ಮಹಾರಾಷ್ಟ್ರದಂತೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುತ್ತಾ.?

1-9 ಕ್ಲಾಸ್ ವರೆಗೆ ಮಹಾರಾಷ್ಟ್ರದಂತೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುತ್ತಾ.?

 

ಬೆಂಗಳೂರು: ವಿಜಯಪುರದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ನಡೆಸಲಾಗಿದ್ದು, ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಏಪ್ರಿಲ್ 8 ರಂದು 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ವಿಚಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಗಾಗಲೇ, ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ.

ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂಬ ಕುರಿತು ಚರ್ಚೆ ನಡೆದಿದೆ. ಇಂದು 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದಾ.!

error: Content is protected !!