ಕೋವಿಡ್ 2ನೇ ಅಲೆ: 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ - BC Suddi
ಕೋವಿಡ್ 2ನೇ ಅಲೆ: 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ  ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ

ಕೋವಿಡ್ 2ನೇ ಅಲೆ: 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ

ಮುಂಬೈ:  ಭಾರತದಲ್ಲಿ ಎರಡನೇ ಕೋವಿಡ್ ವಕ್ಕರಿಸಿಕೊಂಡಿದ್ದು, ಜನರನ್ನು ನಲುಗುವಂತೆ ಮಾಡಿದೆ. ಒಂದು ಕಡೆ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತಿದ್ದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ.

ಇದರ ನಡುವೆ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ. ಇಂದು ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ನೀವು ಕೂಡ ಆಕ್ಸಿಜನ್ ಸಾಂದ್ರಕಗಳನ್ನು ನೀಡಿ ಎಂದು ಇತರರಿಗೆ ಮನವಿ ಮಾಡಿದ್ದಾರೆ.

ಮೊನ್ನೆಯಷ್ಟೆ ಅಕ್ಷಯ್ ಕುಮಾರ್ ಅವರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಟ್ರಸ್ಟ ವೊಂದಕ್ಕೆ ಒಂದು ಕೋಟಿ ರೂಪಾಯಿ ದಾನ ಮಾಡಿದ್ದರು. ಇದೀಗ ದೇಶಕ್ಕೆ ಅಗತ್ಯ ಇರುವ ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ. ಇನ್ನು ದೇಶದಲ್ಲಿ ಕೋವಿಡ್ ಅಲೆ ರಣಭೀಕರತೆ ಸೃಷ್ಟಿಸುತ್ತಿದೆ. ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಆತಂಕಕ್ಕೆ ಕಾರಣವಾಗಿದೆ.

ತೀರ್ಥಹಳ್ಳಿ: ಆರೋಗ್ಯಾಧಿಕಾರಿಗಳ ಎಡವಟ್ಟಿನಿಂದ ಗಲಾಟೆಗಿಳಿದ ಗ್ರಾಮಸ್ಥರು..!