ಗುಜರಾತ್:  ಭರೂಚ್​​, ಪಟೇಲ್ ವೆಲ್ಫೇರ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 18 ಜನ ಮೃತ - BC Suddi
ಗುಜರಾತ್:  ಭರೂಚ್​​, ಪಟೇಲ್ ವೆಲ್ಫೇರ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 18 ಜನ ಮೃತ

ಗುಜರಾತ್:  ಭರೂಚ್​​, ಪಟೇಲ್ ವೆಲ್ಫೇರ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 18 ಜನ ಮೃತ

ಗುಜರಾತ್: ಇಲ್ಲಿನ ಭರೂಚ್​​, ಪಟೇಲ್ ವೆಲ್ಫೇರ್ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ 12.30ರ ವೇಳೆ ಅಗ್ನಿ ಅವಘಡ ಸಂಭವಿಸಿದ್ದು 12 ಕೋವಿಡ್ ರೋಗಿಗಳು ಮತ್ತು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 18 ಜನ ಮೃತಪಟ್ಟಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಸಿಂಹ ಚುಡಸಮ, ಐಸಿಯುವಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಸದ್ಯ ಬೆಂಕಿಯನ್ನು ನಂದಿಸಲಾಗಿದೆ ಎಂದಿದ್ದಾರೆ. ರಾತ್ರಿ ವೇಳೆ 12 ಮಂದಿ ಸಾವನ್ನಪ್ಪಿರುವ ವಿಚಾರ ತಿಳಿದಿದ್ದು, ಸದ್ಯದ ಮಾಹಿತಿ ಪ್ರಕಾರ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ನಾಲ್ಕು ಅಂತಸ್ತಿನ ಆಸ್ಪತ್ರೆಯಲ್ಲಿ ಮುಂಜಾನೆ 1 ಗಂಟೆಗೆ ಕೋವಿಡ್ -19 ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಸುಮಾರು 50 ಇತರ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 12 ರೋಗಿಗಳು ಬೆಂಕಿ ಮತ್ತು ಹೊಗೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಘಟನೆ ನಡೆಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದ್ದಾರೆ.

ಆರ್ ಸಿ ಬಿ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು 34 ರನ್ ಅಂತರದ ಭರ್ಜರಿ ಗೆಲುವು