ಬೆಂಗಳೂರು: ರಾಜ್ಯದ ಜನರು 2-3 ವಾರದವರೆಗೆ ಎಚ್ಚರಿಕೆಯಿಂದ ಇದ್ದರೆ ಮಾತ್ರ ಕೊರೊನಾ 3ನೆ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸಂಖ್ಯೆ ಶೇ.10 ರಷ್ಟಿದ್ದು, ಆದರೆ ಆಸ್ಪತ್ರಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ, ಹಾಗಂತ ಜನರು ನಿರ್ಲಕ್ಷ್ಯ ತೊರದೆ ಇನ್ನು 2-3 ವಾರದ ವರೆಗೆ ಜನರು ಅದಷ್ಟು ಎಚ್ಚರಿಕೆಯಿಂದ ಇರಬೇಕು ಎಂದರು.

3ನೇ ಅಲೆಯಲ್ಲಿ ರಾಜ್ಯದಲ್ಲಿ ಪ್ರತಿ ದಿನ 5,230 ಜನರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 3,442 ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದ 1,788 ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ. ಸದ್ಯದ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 3,62,487 ಸೋಂಕಿತರಿದ್ದಾರೆ ಎಂದು ಹೇಳಿದರು.