ರಾಜ್ಯದಲ್ಲಿಂದು ಕೋವಿಡ್ ಮಹಾ ಸ್ಫೋಟ : 25795 ಜನರಿಗೆ ಅಂಟಿದ ಸೋಂಕು - BC Suddi
ರಾಜ್ಯದಲ್ಲಿಂದು ಕೋವಿಡ್ ಮಹಾ ಸ್ಫೋಟ : 25795 ಜನರಿಗೆ ಅಂಟಿದ ಸೋಂಕು

ರಾಜ್ಯದಲ್ಲಿಂದು ಕೋವಿಡ್ ಮಹಾ ಸ್ಫೋಟ : 25795 ಜನರಿಗೆ ಅಂಟಿದ ಸೋಂಕು

ಬೆಂಗಳೂರು : ಡೆಡ್ಲಿ ಸೋಂಕು ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆದಿದೆ. ಇಂದೊಂದೆ ದಿನ ರಾಜ್ಯದಲ್ಲಿ ಬರೋಬ್ಬರಿ 25,795 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಇದೆ ಸೋಂಕಿಗೆ ಇಂದು 123 ಜನರು ಸಾವನಪ್ಪಿದ್ದಾರೆ.
ಇನ್ನು ಇಂದು ಪತ್ತೆಯಾದ ಹೊಸ ಪ್ರಕರಣಗಳು ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ. ಅದೇ ರೀತಿ ರಾಜ್ಯದಲ್ಲಿಂದು ಸೋಂಕಿಗೆ 123 ಜನ ಸಾವನ್ನಪ್ಪಿದ್ದು ಸೋಂಕಿಗೆ ಬಲಿಯಾದವರ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 5624 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 1037857 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 1,96,236 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 15,244 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 598,919 ಕ್ಕೆ ಏರಿಕೆಯಾಗಿದೆ. 3,509 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,53,398ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 5450 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 1,37,813 ಸಕ್ರಿಯ ಪ್ರಕರಣಗಳಿವೆ.

ಧಾರವಾಡ: ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ದಾಖಲೆಯ 361 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 26, 396ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 185 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 23655 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 5 ಸಾವು ಸಂಭವಿಸಿದ್ದು ಈವರೆಗೆ ಒಟ್ಟು 661 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಮಂಗಳೂರು: ಜಿಲ್ಲೆಯಲ್ಲಿಂದು 474 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,718ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 121 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 36145 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 743 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಇಂದು 276 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,757 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 193 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 26,397ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 194 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೊರೊನಾ 2ನೇ ಅಲೆ ಶವಪರೀಕ್ಷೆ: ಮೊದಲನೇ ಅಲೆಗಿಂತ ಬಯಲಾಯ್ತು ಭಯಾನಕ ಸಂಗತಿ