3000ಕ್ಕೂ ಅಧಿಕ ಕೊರೊನಾ ಸೋಂಕಿತರು ನಾಪತ್ತೆ - BC Suddi
3000ಕ್ಕೂ ಅಧಿಕ ಕೊರೊನಾ ಸೋಂಕಿತರು ನಾಪತ್ತೆ

3000ಕ್ಕೂ ಅಧಿಕ ಕೊರೊನಾ ಸೋಂಕಿತರು ನಾಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ 3000ಕ್ಕೂ ಅಧಿಕ ಕೊರೊನಾ ಸೋಂಕಿತರು ನಾಪತ್ತೆ ಯಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಈ ಕುರಿತು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಸುಮಾರು 3000ಕ್ಕೂ ಅಧಿಕ ಸೋಂಕಿತರು ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರಿಗೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿ, ಕೊನೇ ಘಳಿಗೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದರಿಂದ ಅಪಾಯದ ಜೊತೆಗೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ಅಶೋಕ್ ಹೇಳಿದ್ದಾರೆ.