ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 74ನೇ ಸೇನಾ ದಿನಕ್ಕೆ ಶುಭಾಶಯ ಕೋರಿದ್ದಾರೆ. ಭಾರತೀಯ ಸೇನೆಯ ಕೆಲ ಪ್ರಮುಖ ಫೋಟೋಗಳನ್ನು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಸೇನಾ ದಿನದಂದು ಸೈನಿಕರಿಗೆ ಶುಭಾಶಯ ಸಲ್ಲಿಸಿದ್ದಾರೆ.

“ಸೈನಿಕರು ಪ್ರತಿಕೂಲ ವಾತಾವರಣವಿರುವ ಪ್ರದೇಶಗಳಲ್ಲಿ ನಿತ್ಯ ಸೇವೆ ಸಲ್ಲಿಸುತ್ತಾರೆ. ದೇಶ ನೈಸರ್ಗಿಕ ವಿಕೋಪಗಳಂತಹ ಸಮಸ್ಯೆಗಳನ್ನು ಎದುರಿಸುವಾಗ ಸೈನಿಕರು ನೆರವಿಗೆ ಧಾವಿಸುತ್ತಾರೆ. ಸಾಗರೋತ್ತರ ಶಾಂತಿ ಪಾಲನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸೇವೆಯನ್ನು, ತ್ಯಾಗವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸೈನಿಕರಿಗೆ, ಅವರ ಕುಟುಂಬದವರಿಗೆ ಸೇನಾ ದಿನದ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.