ಹಬ್ಬದ ಶಾಪಿಂಗ್‌ನಲ್ಲಿ ದಂಪತಿ ಬಿಜಿ: ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಮಗುವಿನ ಹೋರಾಟ - BC Suddi
ಹಬ್ಬದ ಶಾಪಿಂಗ್‌ನಲ್ಲಿ ದಂಪತಿ ಬಿಜಿ: ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಮಗುವಿನ ಹೋರಾಟ

ಹಬ್ಬದ ಶಾಪಿಂಗ್‌ನಲ್ಲಿ ದಂಪತಿ ಬಿಜಿ: ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಮಗುವಿನ ಹೋರಾಟ

ಬೆಂಗಳೂರು: ಕಾರಿನಲ್ಲಿ ಮಗುವನ್ನು ಬಿಟ್ಟು ಯುಗಾದಿ ಹಬ್ಬದ ಶಾಪಿಂಗ್‌ಗೆ ತೆರಳಿದ ಪರಿಣಾಮ ಮಗು ಉಸಿರುಗಟ್ಟಿ ನರಳಾಡಿದ ಘಟನೆ ನಗರದ ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ನಡೆದಿದೆ. ದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಮಗುವಿನ ಪ್ರಾಣ ಉಳಿದೆ.

ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ಸೋಮವಾರ ರಾತ್ರಿ ನಾಲ್ಕು ವರ್ಷದ ಮಗುವನ್ನು ಕಾರಿನಲ್ಲೇ ಬಿಟ್ಟು ದಂಪತಿ ಶಾಪಿಂಗ್​ಗೆ ತೆರಳಿದ್ದರು. ಕೀ ಕಾರಿನಲ್ಲೇ ಇದ್ದಿದ್ರಿಂದ ಆಟೋಮೆಟಿಕ್ ಲಾಕ್ ಆಗಿತ್ತು. ಇದಾದ ಕೆಲವೊತ್ತಿನಲ್ಲೇ ಉಸಿರುಗಟ್ಟಲು ಆರಂಭಿಸಿ ಮಗು ಚೀರಾಡಲು ಶುರು ಮಾಡಿತು. ಇದೇ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಸ್ಥಳೀಯರು ಕಾರಿನ ಕಿಟಕಿ ಬಳಿ ಮಗು ಅಳುವುದನ್ನು ನೋಡಿದ್ದಾರೆ. ತಕ್ಷಣವೇ ಕಾರಿನ ಗಾಜು ಒಡೆದು ಮಗುವನ್ನು ರಕ್ಷಿಸಿದ್ದಾರೆ.

ರಂಜಾನ್ ಹಬ್ಬ : ಹೊಸ ಗೈಡ್ ಲೈನ್ಸ್ ಪ್ರಕಟಿಸಿದ ಸರ್ಕಾರ

ಶಾಪಿಂಗ್ ಮುಗಿಸಿಕೊಂಡ ಬಂದ ಮಗುವಿನ ತಂದೆ ತಾಯಿಗೆ ಸ್ಥಳೀಯರು ಫುಲ್ ಕ್ಲಾಸ್ ತೆಗೆದುಕೊಂಡರು. ಸ್ಥಳದಲ್ಲಿದ್ದ ಕೆಲವರು ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ದಂಪತಿಯ ನಿಷ್ಕಾಳಜಿ ಬಗ್ಗೆ ಕಿಡಿಕಾರಿದ್ದಾರೆ.