ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ : ಏ. 17 ಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ - BC Suddi
ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ : ಏ. 17 ಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ : ಏ. 17 ಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಏಪ್ರಿಲ್ 17 ರಂದು ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಪತ್ರವೊಂದರಲ್ಲಿ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಏಪ್ರಿಲ್ 17 ರ ಶನಿವಾರದ ಸಭೆಯಲ್ಲಿ ದೇಶದಲ್ಲಿನ ಕೋವಿಡ್-19 ರ ಎರಡನೇ ತರಂಗಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಕೋವಿಡ್ 19 ರ ಎರಡನೇ ಅಲೆಯ ಈಗಾಗಲೇ ಭಾರತದಲ್ಲಿ 13.7 ಮಿಲಿಯನ್ ಜನರ ಮೇಲೆ ಪರಿಣಾಮ ಬೀರಿದೆ, ಇದು ಜಾಗತಿಕ ಪ್ರಕರಣಗಳಲ್ಲಿ ಶೇಕಡಾ 10 ರಷ್ಟಿದೆ. ಹೀಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಇಬ್ಬರೂ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದು, ಬಿಕ್ಕಟ್ಟನ್ನು ನಿಭಾಯಿಸಲು ಕ್ರಮಗಳನ್ನು ಸೂಚಿಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ಲಾಕ್‌ಡೌನ್ ಮಾಡುವ ಆಲೋಚನೆಯಲ್ಲಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್