ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ..ಮಹಿಳೆಯ ಈ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ| - BC Suddi
ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ..ಮಹಿಳೆಯ ಈ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ|

ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ..ಮಹಿಳೆಯ ಈ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ|

ಮಧ್ಯಪ್ರದೇಶ : ದೇಶದಲ್ಲಿ ಪ್ರತಿದಿನ ಒಂದಿಲ್ಲೊಂದು ಅತ್ಯಾಚಾರದಂತಹ ಅಮಾನವೀಯ ಕೃತ್ಯಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದರ ಮಧ್ಯೆ ಮಧ್ಯಪ್ರದೇಶ ಮಹಿಳೆಯೋರ್ವಳು ತೆಗೆದುಕೊಂಡಿರುವ ನಿರ್ಧಾರಕ್ಕೆಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. 45 ವರ್ಷದ ಮಹಿಳೆಯೋರ್ವಳು ಮಗನೊಂದಿಗೆ ಮನೆಯಲ್ಲಿದ್ದಾಗ ಆಕೆಯ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಲು ಮುಂದಾಗಿದ್ದಾನೆ.

ಈ ವೇಳೆ ಧೈರ್ಯ ಕಳೆದುಕೊಳ್ಳದ ಮಹಿಳೆ ಧೈರ್ಯದಿಂದ ಆತನ ಮರ್ಮಾಂಗ ಕತ್ತರಿಸಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಉಮರಿಹಾ ಗ್ರಾಮದಲ್ಲಿ ಈ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿರುವ ದೂರಿನ ಪ್ರಕಾರ, ಗಂಡ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದಾಗ ದುಷ್ಕರ್ಮಿಯೋರ್ವ ಮನೆಯೊಳಗೆ ನುಗ್ಗಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಇದಾದ ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದಾನೆ. ಸುಮಾರು 20 ನಿಮಿಷಗಳ ಕಾಲ ಈ ಘಟನೆ ನಡೆದಿದ್ದು, ಈ ವೇಳೆ ಹಾಸಿಗೆ ಕೆಳಗಿಟ್ಟಿದ್ದ ಕುಡಗೋಲು ತೆಗೆದುಕೊಂಡು ಆತನ ಮರ್ಮಾಂಗ ಕತ್ತರಿಸಿದ್ದಾಳೆ. ನಂತರ ಪೊಲೀಸ್​ ಠಾಣೆಗೆ ದೌಡಾಯಿಸಿದ್ದಾಳೆ. ಘಟನಾ ಸ್ಥಳಕ್ಕೆ ಬಂದಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತಕ್ಷಣವೇ ಆತನನ್ನು ಸಿದ್ಧಿ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದಾರೆ.

ಇದಾದ ಬಳಿಕ ರೇವಾದಲ್ಲಿ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜ್​ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಆರೋಪ ಹೊತ್ತಿರುವ ವ್ಯಕ್ತಿ ಕೂಡ ಮಹಿಳೆ ವಿರುದ್ಧ ದೂರು ದಾಖಲು ಮಾಡಿರುವುದಾಗಿ ವರದಿಯಾಗಿದೆ.

error: Content is protected !!