ರಾಜಧಾನಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ 8 ಐಎಎಸ್ ಅಧಿಕಾರಿಗಳ ತಂಡ ರಚನೆ - BC Suddi
ರಾಜಧಾನಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ 8 ಐಎಎಸ್ ಅಧಿಕಾರಿಗಳ ತಂಡ ರಚನೆ

ರಾಜಧಾನಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ 8 ಐಎಎಸ್ ಅಧಿಕಾರಿಗಳ ತಂಡ ರಚನೆ

ಬೆಂಗಳೂರು : ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿರ್ವಹಣಾ ಕ್ರಮಗಳ ಮೇಲ್ವಿಚಾರಣೆ ಮತ್ತು ಪರಿಶೀಲಸಲು ಹಾಗೂ ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರದಿಂದ ಟೀಂ ರಚನೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದು, ವಿಪತ್ತು ನಿರ್ವಹಣಾ ಕಾಯ್ದೆ-2005ರ ಸೆಕ್ಷನ್ 69ರ ಅಡಿಯಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಬಹುದಾಗಿದೆ. ಕೋವಿಡ್ ಹರಡುವಿಕೆ ನಿಯಂತ್ರಣ ಹಾಗೂ ಇನ್ನಿತರ ಮೇಲ್ವಿಚಾರಣೆಯಲ್ಲಿ ಕಟ್ಟುನಿಟ್ಟಿನ ಮೇಲುಸ್ತುವಾರಿ ನೋಡಿಕೊಳ್ಳಲು ಒಟ್ಟು 8ಜನ ಐಎಎಸ್ ಅಧಿಕಾರಿಗಳನ್ನು ಒಳಗೊಂಡಂತೆ ತಂಡ ರಚಿಲಾಗಿದೆ.

ಬೆಂಗಳೂರು ಪೂರ್ವ – ಮನೋಜ್ ಕುಮಾರ್ ಮೀನಾ
ಬೆಂಗಳೂರು ಪಶ್ಚಿಮ – ಉಜ್ವಲ್ ಕುಮಾರ್ ಘೋಷ್
ಬೊಮ್ಮನಹಳ್ಳಿ – ಡಾ.ರವಿಕುಮಾರ್ ಸುರ್ ಪುರ್
ಯಲಹಂಕ – ವಿ ಅನ್ಬುಕುಮಾರ್
ಬೆಂಗಳೂರು ದಕ್ಷಿಣ – ಪಂಕಜ್ ಕುಮಾರ್ ಪಾಂಡೆ
ಮಹದೇವಪುರ – ಡಾ.ಎನ್ ಮಂಜುಳ
ದಾಸರಹಳ್ಳಿ – ಡಾ.ಪಿಸಿ ಜಾಫರ್
ರಾಜರಾಜೇಶ್ವರಿ ನಗರ – ಡಾ.ಆರ್ ವಿಶಾಲ್

ಈ ಎಲ್ಲ ಅಧಿಕಾರಿಗಳು ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣಾ ಕ್ರಮಗಳ ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ.

error: Content is protected !!