ಸುಪ್ರೀಂಕೋರ್ಟ್ ಸಿಜೆಐ ಆಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ - BC Suddi
ಸುಪ್ರೀಂಕೋರ್ಟ್ ಸಿಜೆಐ ಆಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ

ಸುಪ್ರೀಂಕೋರ್ಟ್ ಸಿಜೆಐ ಆಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ಶನಿವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಎನ್.ವಿ.ರಮಣ ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು. ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು.

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೋಬ್ಡೆ ನಿನ್ನೆ ನಿವೃತ್ತರಾಗಿದ್ದು, ಅವರ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಾಮೂರ್ತಿ ಎನ್​.ವಿ. ರಮಣ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅವರ 2022ರ ಆಗಸ್ಟ್ 26 ರವರೆಗೂ ರಮಣ ಅವರು ಸಿಜೆಐ ಆಗಿರಲಿದ್ದಾರೆ.

ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ 1957ರ ಆಗಸ್ಟ್​ 27ರಂದು ಜನಿಸಿದ ಎನ್​.ವಿ.ರಮಣ ಅವರು 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಪ್ರಾರಂಭಿಸಿದರು. 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು. 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು. ಕಳೆದ ವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ಇತ್ತೀಚೆಗಷ್ಟೇ ಈ ಆರೋಪದಿಂದ ಇವರಿಗೆ ಕ್ಲೀನ್​ಚಿಟ್​ ಪಡೆದಿದ್ದಾರೆ.

ಉಡುಪಿ: ಮಾಸ್ಕ್ ಇಲ್ಲದೆ ಮೆಹೆಂದಿ ಸಂಭ್ರಮದಲ್ಲಿ ಜಿಲ್ಲಾಧಿಕಾರಿ ಭಾಗಿ; ಜನರ ಆಕ್ರೋಶ