ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ದಾಖಲೆಯ 3,86,452 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆ..! - BC Suddi
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ದಾಖಲೆಯ 3,86,452 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆ..!

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ದಾಖಲೆಯ 3,86,452 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆ..!

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿದೆ. ಇಂದು ದಾಖಲೆ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ದಾಖಲೆಯ 3,86,452 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 3,498 ಸೋಂಕಿತರು ಮೃತಪಟ್ಟಿದ್ದಾರೆ.

ಇದೇ ಅವಧಿಯಲ್ಲಿ 2,97,540 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ ಒಟ್ಟು 1,87,62,976 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,08,330 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೂ ಒಟ್ಟು 1,53,84,418 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 31,70,228 ಸಕ್ರಿಯ ಪ್ರಕರಣಗಳಿವೆ. ಈವರೆಗೆ 15,22,45,179 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೊರೊನಾ ವೈರಸ್ : ಮಹತ್ವದ ವಿಚಾರ ಚರ್ಚಿಸಲು ಕೇಂದ್ರ ಕ್ಯಾಬಿನೆಟ್ ಸಭೆ ಕರೆದ ಪ್ರಧಾನಿ ಮೋದಿ