ನಟ ರಕ್ಷಿತ್ ಶೆಟ್ಟಿ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ - BC Suddi
ನಟ ರಕ್ಷಿತ್ ಶೆಟ್ಟಿ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ

ನಟ ರಕ್ಷಿತ್ ಶೆಟ್ಟಿ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ಕೋರ್ಟ್ ಅನುಮತಿ ಕೊಟ್ಟಿದೆ.

‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಲಾಗಿತ್ತು. ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋ ವಿರುದ್ಧ ಲಹರಿ ಸಂಸ್ಥೆಯವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.

ಮೊಕದ್ದಮೆ ವಿಚಾರಣೆಗೆ ಹಲವು ಬಾರಿ ಗೈರಾಗಿದ್ದರಿಂದ ಅವರೆಲ್ಲರನ್ನೂ ಬಂಧಿಸಿ ಏಪ್ರಿಲ್ 27ರಂದು ವಿಚಾರಣೆಗೆ ಹಾಜರುಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯ ಆದೇಶದಲ್ಲಿ ಹೇಳಿದೆ. ಈ ಬಗ್ಗೆ ಕ್ರಿಮಿನಲ್ ಮತ್ತು ಸಿವಿಲ್ ಕೇಸ್ ಹಾಕಿದ್ದ ಲಹರಿ ರೆಕಾರ್ಡಿಂಗ್ಸ್ ಕಾನೂನು ಹೋರಾಟ ಆರಂಭಿಸಿತ್ತು. ಕಾಪಿ ರೈಟ್ಸ್ ಆಕ್ಟ್ 63ಎ & 63 ಬಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾವಣೆ ಮಾಡಿ ಎಂದು ಜನರನ್ನು ಕೋರಿದ ಪ್ರಧಾನಿ ನರೇಂದ್ರ ಮೋದಿ