ಇತ್ತೀಚೆಗೆ ಬಿಡುಗಡೆಯಾದ ಚಿತ್ರಗಳಿಗೆ ಸರ್ಕಾರದಿಂದ ತಂದಿದೆ: ನಟ ಸುದೀಪ್‌ - BC Suddi
ಇತ್ತೀಚೆಗೆ ಬಿಡುಗಡೆಯಾದ ಚಿತ್ರಗಳಿಗೆ ಸರ್ಕಾರದಿಂದ ತಂದಿದೆ: ನಟ ಸುದೀಪ್‌

ಇತ್ತೀಚೆಗೆ ಬಿಡುಗಡೆಯಾದ ಚಿತ್ರಗಳಿಗೆ ಸರ್ಕಾರದಿಂದ ತಂದಿದೆ: ನಟ ಸುದೀಪ್‌

ಬೆಂಗಳೂರು: ಕೋವಿಡ್‌-19 ನಿಯಂತ್ರಣಕ್ಕಾಗಿ ರಾಜ್ಯದ 8 ಜಿಲ್ಲೆಗಳ ಥಿಯೇಟರ್‌ಗಳಲ್ಲಿ ಶೇ. 50 ಸೀಟು ಭರ್ತಿಗಷ್ಟೇ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಟ ಸುದೀಪ್‌ ಅವರು ಟ್ವೀಟ್‌ ಮಾಡಿ ಆಕ್ಷೇಪ ವ್ಯಕ್ತಪ‍ಡಿಸಿದ್ದಾರೆ.

‘ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ. ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣವಿರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ. ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ಆಶಿಸುತ್ತೇನೆ’ ಎಂದು ಟ್ವೀಟ್‌ ಮಾಡಿ ಸುದೀಪ್‌ ಹೇಳಿದ್ದಾರೆ.

ಸುದೀಪ್‌ ಅಭಿನಯದ ಕೋಟಿಗೊಬ್ಬ-3 ಚಿತ್ರವೂ ಇದೇ ತಿಂಗಳು ಬಿಡುಗಡೆಯಾಗಲು ಸಜ್ಜಾಗಿತ್ತು.

ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಶೇ. 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ʻಯುವರತ್ನʼ ಚಿತ್ರ ಬಿಡುಗಡೆಯಾದ ಎರಡೇ ದಿನಕ್ಕೆ ಸರ್ಕಾರ ನಿರ್ಬಂಧ ಹಾಕಿರುವುದಕ್ಕೆ ನಟ ಪುನೀತ್‌ ರಾಜ್‌ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸರ್ಕಾರ ಹೊರಡಿಸಿರುವ ಕೊರೊನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ’ – ಸುಧಾಕರ್ ಸ್ಪಷ್ಟನೆ

error: Content is protected !!