ಕೊರೊನಾ ವೈರಸ್ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದಿ ಸ್ಯಾಂಡಲ್‌ವುಡ್ ನಟಿ ರಮ್ಯಾ - BC Suddi
ಕೊರೊನಾ ವೈರಸ್ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದಿ  ಸ್ಯಾಂಡಲ್‌ವುಡ್ ನಟಿ ರಮ್ಯಾ

ಕೊರೊನಾ ವೈರಸ್ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದಿ ಸ್ಯಾಂಡಲ್‌ವುಡ್ ನಟಿ ರಮ್ಯಾ

ನವದೆಹಲಿ: ಬಿಜೆಪಿ, ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಯಾಂಡಲ್‌ವುಡ್ ನಟಿ ರಮ್ಯಾ ಒಂದಿಲ್ಲೊಂದು ವಿಚಾರವಾಗಿ ವಾಗ್ದಾಳಿ ನಡೆಸುತ್ತಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ರಮ್ಯಾ, “ಅಜಾಗರೂಕತೆ ಮತ್ತು ದುರಹಂಕಾರದ ಮೋದಿಯಿಂದಾಗಿ ಅನೇಕರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಸರ್ಕಾರಕ್ಕೆ ಕೇಳಿಸಿಕೊಳ್ಳುವ ವ್ಯವಧಾನ ಇಲ್ಲ. ಅಧಿಕಾರಕ್ಕಾಗಿ ದುರಾಸೆ ಪಡುತ್ತಿರುವ ಈ ಸರ್ಕಾರಕ್ಕೆ ಯಾವುದೇ ಸಹಾನುಭೂತಿ ಇಲ್ಲ. ಇದನ್ನು ಕ್ಷಮಿಸಲು ಅಸಾಧ್ಯ. ಇಂದು ನಡೆಯುತ್ತಿರುವುದು ನನಗೆ ಆಘಾತ ತಂದಿದೆ ಮತ್ತು ಕೋಪವನ್ನುಂಟು ಮಾಡಿದೆ” ಎಂದು ಬರೆದುಕೊಂಡಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಅಬ್ಬರ ವಿಪರೀತವಾಗಿದೆ. ಹೊಸ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೊರೊನಾ ವೈರಸ್ ಸೋಂಕಿನಿಂದ ಕೊನೆಯುಸಿರೆಳೆಯುತ್ತಿರುವವರ ಸಂಖ್ಯೆಯೂ ಅಧಿಕವಾಗುತ್ತಿದೆ ಎಂದು ವಿವರಿಸಿದ್ದಾರೆ.

ಮತ ಎಣಿಕೆ ಮುನ್ನವೇ ಕೋವಿಡ್ ಗೆ ಬಲಿಯಾದ ಅಭ್ಯರ್ಥಿ