ಪಂಜಾಬ್‌ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದ ಕೆಕೆಆರ್..! - BC Suddi
ಪಂಜಾಬ್‌ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದ ಕೆಕೆಆರ್..!

ಪಂಜಾಬ್‌ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದ ಕೆಕೆಆರ್..!

ಅಹಮದಾಬಾದ್​: ಉತ್ತಮ ಬೌಲಿಂಗ್ ಪ್ರದರ್ಶನ, ರಾಹುಲ್ ತ್ರಿಪಾಠಿ ಹಾಗೂ ನಾಯಕ ಇಯಾನ್ ಮೋರ್ಗಾನ್ ಅಬ್ಬರದ ಬ್ಯಾಟಿಂಗ್‌ನಿಂದ ಪಂಜಾಬ್ ಕಿಂಗ್ಸ್‌ಅ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 5 ವಿಕೆಟ್‌ಗಳಿಂದ ಗೆಲುವು ದಾಖಲಿಸಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 124 ರನ್‌ಗಳ ಗುರಿ ನೀಡಿತ್ತು. ಈ ಸಾಧಾರಣ ಟಾರ್ಗೆಟ್ ಗುರಿ ಬೆನ್ನಟ್ಟಿದ ಕೆಕೆಆರ್ 20 ಎಸೆತಗಳು ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 126 ರನ್ ಚಚ್ಚಿ ಗೆದ್ದು ಬೀಗಿದೆ. ಕೆಕೆಆರ್ ಪರ ಇಯಾನ್ ಮೋರ್ಗಾನ್ ಅಜೇಯ 47 ರನ್ ಹಾಗೂ ರಾಹುಲ್ ತ್ರಿಪಾಠಿ 41 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಪಂಜಾಬ್ 9 ವಿಕೆಟ್ ನಷ್ಟಕ್ಕೆ 123 ರನ್‌ ಗಳಿಸಲು ಶಕ್ತವಾಗಿತ್ತು. ತಂಡದ ಪರ ಮಯಾಂಕ್ ಅಗರ್ವಾಲ್ 31 ರನ್ ಹಾಗೂ ಕ್ರಿಸ್ ಜೋರ್ಡಾನ್ 30 ರನ್ ಗಳಿಸಿದ್ದರು. ಉಳಿದಂತೆ ನಾಯಕ ಕೆ.ಎಲ್.ರಾಹುಲ್ (19 ರನ್), ಕ್ರಿಸ್ ಗೈಲ್ (0 ರನ್), ದೀಪಕ್ ಹೂಡಾ (1 ರನ್), ನಿಕೋಲಸ್ ಪೂರನ್ (19 ರನ್) ಬ್ಯಾಟಿಂಗ್ ವೈಫಲ್ಯ ತೋರಿದ್ದರು. ಪಂಜಾಬ್ ತನ್ನ ಇನ್ನಿಂಗ್ಸ್‌ನಲ್ಲಿ ಕೇವಲ 5 ಬೌಂಡರಿ ಬಾರಿಸಿತ್ತು.

ಇತ್ತ ಕೆಕೆಆರ್ ಪರ ಕನ್ನಡಿಗ ಪ್ರಸಿದ್ ಕೃಷ್ಣ 3 ವಿಕೆಟ್ ಕಿತ್ತು ಮಿಂಚಿದರೆ, ಪ್ಯಾಟ್ ಕಮ್ಮಿನ್ಸ್, ಸುನಿಲ್ ನರೈನ್ ತಲಾ 2 ವಿಕೆಟ್, ವರುಣ್ ಚಕ್ರವರ್ತಿ ಹಾಗೂ ಶಿವಂ ಮಾವಿ ತಲಾ 1 ವಿಕೆಟ್ ಪಡೆದಿದ್ದರು.

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಂದು 29,744 ಹೊಸ ಕೊರೋನಾ ಪ್ರಕರಣಗಳು ಪತ್ತೆ