ರಾಜ್ಯಪಾಲರ ನೇತೃತ್ವದಲ್ಲಿ ಇಂದು ಸರ್ವಪಕ್ಷ ಸಭೆ: ಕಠಿಣ ರೂಲ್ಸ್ ಜಾರಿ ಸಾಧ್ಯತೆ - BC Suddi
ರಾಜ್ಯಪಾಲರ ನೇತೃತ್ವದಲ್ಲಿ ಇಂದು ಸರ್ವಪಕ್ಷ ಸಭೆ: ಕಠಿಣ ರೂಲ್ಸ್ ಜಾರಿ ಸಾಧ್ಯತೆ

ರಾಜ್ಯಪಾಲರ ನೇತೃತ್ವದಲ್ಲಿ ಇಂದು ಸರ್ವಪಕ್ಷ ಸಭೆ: ಕಠಿಣ ರೂಲ್ಸ್ ಜಾರಿ ಸಾಧ್ಯತೆ

ಬೆಂಗಳೂರು : ಕೊರೊನಾ ಭೀಕರ ವೈರಸ್ ನ ಎರಡನೇ ಅಲೆ ಅಟ್ಟಹಾಸ ಮಿತಿ ಮೀರಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಈ ಸಭೆ ಮೂಲಕ ಮತ್ತಷ್ಟು ಕಠಿಣ ನಿಯಮಗಳು ಜಾರಿಯಾಗುವ ಸಾಧ್ಯತೆ ಇದೆ.

ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ಮಂಗಳವಾರ ರಾಜ್ಯಪಾಲ ವಿ.ಆರ್. ವಾಲಾ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ಈ ವೇಳೆ ಬೆಂಗಳೂರು ಜನಪ್ರತಿನಿಧಿಗಳ ಸಭೆಯ ಅಭಿಪ್ರಾಯ, ಕೊರೊನಾ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಅಭಿಪ್ರಾಯವನ್ನು ಮುಂದಿಟ್ಟುಕೊಂಡು ಚರ್ಚೆ ನಡೆಯಲಿದೆ. ಬಳಿಕ ಯಾವ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧರಿಸುತ್ತಾರೆ. ಮಂಗಳವಾರ ಸಂಜೆ ಈ ಬಗ್ಗೆ ಸ್ಪಷ್ಟ ಮಾರ್ಗಸೂಚಿಯನ್ನು ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.