ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಕಿಂಗ್ ಪಿನ್ಸ್'ಗಳ ವಿರುದ್ಧ ಸ್ಪೋಟಕ ಹೇಳಿಕೆ ನೀಡಿದ ಸಿಡಿ ಲೇಡಿ - BC Suddi
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಕಿಂಗ್ ಪಿನ್ಸ್’ಗಳ ವಿರುದ್ಧ ಸ್ಪೋಟಕ ಹೇಳಿಕೆ ನೀಡಿದ ಸಿಡಿ ಲೇಡಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಕಿಂಗ್ ಪಿನ್ಸ್’ಗಳ ವಿರುದ್ಧ ಸ್ಪೋಟಕ ಹೇಳಿಕೆ ನೀಡಿದ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಎಸ್‌ಐಟಿ ಅಧಿಕಾರಿಗಳ ಮುಂದೆ ಸಿಡಿ ಯುವತಿ ಉಲ್ಟಾ ಹೇಳಿಕೆ ನೀಡಿದ್ದಾಳೆ. ಕಿಂಗ್ ಪಿನ್ಸ್ ನರೇಶ್ ಮತ್ತು ಶ್ರವಣ್ ನನ್ನನ್ನು ಹನಿ ಟ್ರ್ಯಾಪ್‌ಗೆ ಬಳಿಸಿಕೊಂಡು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ಸಿಡಿ ಲೇಡಿ ಆರೋಪ ಮಾಡಿದ್ದು, ನನ್ನನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದೇ ನರೇಶ್, ಶ್ರವಣ್ ಎಂದು ಎಸ್‌ಐಟಿ ಮುಂದೆ ಇಂದು ಹಾಜರಾಗಿ ಸಿಡಿ ಯುವತಿ ಹೇಳಿಕೆ ನೀಡಿದ್ದಾಳೆ.

ಇನ್ನು ರಮೇಶ್ ಜಾರಕಿಹೊಳಿ ವಿರುದ್ಧ ನನ್ನ ಹೇಳಿಕೆ ಪೂರ್ಣ ಸತ್ಯವಲ್ಲ, ನಾನು ಹನಿಟ್ರ್ಯಾಪ್‌ ಆಗಿದ್ದೆ. ನರೇಶ್ ಹಾಗೂ ಶ್ರವಣ್ ನನ್ನನ್ನು ಆ ರೀತಿ ಬಳಸಿಕೊಂಡಿದ್ದು, ಅವರು ಹೇಳಿದಂತೆ ನಾನು ನಡೆದುಕೊಂಡೆ. ಈ ಹಿಂದೆ ಒತ್ತಡದಲ್ಲಿದ್ದರಿಂದ ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಕವಿತಾ ಮುಂದೆ ಯುವತಿ ನೀಡಿರುವ ಹೇಳಿಕೆಯನ್ನು ಕ್ಯಾಮೆರಾದಲ್ಲಿ ಎಸ್‌ಐಟಿ ರೆಕಾರ್ಡ್ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.

ಸಿಡಿ ಲೇಡಿಯನ್ನು ಇದೀಗ ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ಮತ್ತೊಮ್ಮೆ ಜಡ್ಜ್‌ ಮುಂದೆ ಹಾಜರುಪಡಿಸಲು ಎಸ್‌ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೆ ಎನ್ನಲಾಗಿದೆ.

ಕೊರೊನಾ ಹೆಚ್ಚಳ, ಒಂದು ವಾರ ಕಾದು ನೋಡ್ತಿವಿ :ಲಾಕ್ ಡೌನ್ ಸುಳಿವು ಕೊಟ್ಟ ಸಿಎಂ