ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ - BC Suddi
ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ತೋಟಗಾರಿಕೆ  ಇಲಾಖೆಯ ಅಧೀನದ ಚಿತ್ರದುರ್ಗ ತಾಲ್ಲೂಕಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ  2021-22 ಸಾಲಿನಲ್ಲಿ 2021ರ ಮೇ 3 ರಿಂದ 2022ರ ಫೆಬ್ರುವರಿ 28ರ ವರೆಗೆ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ತರಬೇತಿಗೆ ಆಯ್ಕೆಯಾದ ಪುರುಷ ಶಿಭಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮತ್ತು ಮಹಿಳಾ ಶಿಬಿರಾರ್ಥಿಗಳಿಗೆ ಮೈಸೂರು ಜಿಲ್ಲೆಯ ರಂಗಸಮುದ್ರದಲ್ಲಿರುವ ಪ್ರತ್ಯೇಕ ಮಹಿಳಾ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ನೀಡಲಾಗುವುದು.

ಚಿತ್ರದುರ್ಗ ಜಿಲ್ಲೆಯಿಂದ ತರಬೇತಿಗಾಗಿ 08 ಪುರುಷರು ( ಇತರೆ-06, ಪರಿಶಿಷ್ಟ ಜಾತಿ-02), 03 ಮಹಿಳೆಯರು (ಇತರೆ-02, ಪರಿಶಿಷ್ಟ ಜಾತಿ-1) ಆಯ್ಕೆ ಮಾಡುವ ಗುರಿ ಹೊಂದಲಾಗಿದೆ.

ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕನಿಷ್ಠ 18 ರಿಂದ 33 ವರ್ಷದವರಾಗಿರಬೇಕು. ಇತರೆ ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ 30 ವರ್ಷದವರಾಗಿರಬೇಕು.

ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪ ನಿರ್ದೇಶಕರು, ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ http://horticulturedir.karnataka.gov.in  ನಲ್ಲಿ ಮಾರ್ಚ್ 24 ರಿಂದ ಏಪ್ರಿಲ್ 17ರವರೆಗೆ ಕಚೇರಿ ವೇಳೆಯಲ್ಲಿ ಪಡೆಯಬಹುದು.

ಅರ್ಜಿ ಶುಲ್ಕವು ಸಾಮಾನ್ಯ ಆಭ್ಯರ್ಥಿಗಳಿಗೆ ರೂ.30 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಅರ್ಡರ್ (ಐಪಿಒ), ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಅನ್ನು Deputy Director of Horticulture (ZP), Chitradurga  ರವರ ಹೆಸರಿನಲ್ಲಿ ಪಡೆದು, ನಿಗಧಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಾಗ ಲಗತ್ತಿಸಿ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!