ಬಂಟ್ವಾಳ: ಬಂಟ್ವಾಳ ತಾಲೂಕು ಬ್ರಹ್ಮರಕೂಟ್ಲು ಸಮೀಪದ ಉಮ್ಮಣ್ಣಗುಡ್ಡೆ ನಿವಾಸಿ ಮನೋಜ್(30) ಎಂಬ ಯುವಕನಿಗೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಿಂದ ಕಡಿದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ನಲ್ಲಿ ನಡೆದಿದೆ. ಯುವಕನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಮನೋಜ್, ಅಜ್ಜಿಬೆಟ್ಟು ಕ್ರಾಸ್ನ ಬಳಿ ಗಾಡಿ ನಿಲ್ಲಿಸಿ ಅಂಗಡಿ ಮುಂಭಾಗ ನಿಂತಾಗ ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ಬಂದ ದುಷ್ಕರ್ಮಿಗಳಿಬ್ಬರು ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ.
ವಿದೇಶದಲ್ಲಿ ಸಿವಿಲ್ ಎಂಜಿನಿಯರ್ ಆಗಿರುವ ಮನೋಜ್ ಎರಡು ವಾರ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅವರಿಗೆ ಮದುವೆ ನಿಶ್ಚಯವಾಗಿದ್ದು, ಸದ್ಯದಲ್ಲೇ ವಿವಾಹ ನಿಗದಿಯಾಗಿತ್ತು ಎಂದು ತಿಳಿದುಬಂದಿದೆ.