ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಸೋಂಕು ದೃಢ - BC Suddi
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಸೋಂಕು ದೃಢ

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಸೋಂಕು ದೃಢ

ಕಾರವಾರ: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶಿರಸಿಯಲ್ಲಿ ಅವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು.

ಈ ವೇಳೆ ಅವರಿಗೆ ಸೋಂಕು ಪತ್ತೆಯಾಗಿದೆ. ಆದರೂ ಯಾವುದೇ ರೀತಿಯ ಲಕ್ಷಣಗಳು ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ. ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,62,770 ಹೊಸ ಪ್ರಕರಣಗಳು ಪತ್ತೆ..!