ಕೋಲಾರ: ಹೆರಿಗೆಗೆಂದು ಬಂದಿದ್ದ ಗರ್ಭಿಣಿ ಮತ್ತು ಮಗು ಮೃತಪಡಲು ವೈದ್ಯರ‌ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ಕೋಲಾರದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಕೋಲಾರ ಹೊರವಲಯದ ಟಮಕ ಬಳಿ ಇರುವ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ನಿಡಗುರ್ಕಿ ಗ್ರಾಮದ ಅನುಷಾ (24) ಎಂಬಾಕೆಯನ್ನು ಕರೆತರಲಾಗಿತ್ತು.

ಹೆರಿಗೆ ನೋವಿನಿಂದ ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದ ಅನುಷಾ ಅವರಿಗೆ ಸರಿಯಾಗಿ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ತೋರಿದ ಹಿನ್ನೆಲೆ ತಾಯಿ ಮತ್ತು ಮಗು ಸಾವಿಗೀಡಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ನಂತರ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.v