ಚಿಕ್ಕಮಗಳೂರು: ತಾನು ಪ್ರೀತಿಸಿದ ಹುಡುಗಿಗೆ‌ ಬೇರೆ ಮದುವೆಗೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಮನನೊಂದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ ನಡೆಸಿದ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಈ ಘಟನೆ ನಡೆದಿದೆ. ಬಣಕಲ್ ನ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ ಯುವಕ.

ರಾಘವೇಂದ್ರನು ಯುವತಿಯನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ಯುವತಿಯ ಪೋಷಕರು ಯುವತಿಗೆ ಬೇರೆ ಯುವಕನೊಂದಿಗೆ ಮದುವೆ ಮಾಡಲು ಸಿದ್ದತೆ ನಡೆಸಿದ್ದರು.

ಈ ವಿಚಾರ ತಿಳಿದು ಮನನೊಂದ ರಾಘವೇಂದ್ರ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ರಾಘವೇಂದ್ರನಿಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.