ಬೆಂಗಳೂರು: ವಾರಾಂತ್ಯದ ಕರ್ಫ್ಯೂನಿಂದಾಗಿ ಶನಿವಾರ, ಭಾನುವಾರ ಮೆಟ್ರೋ ಸಂಚಾರ ರದ್ದು - BC Suddi
ಬೆಂಗಳೂರು: ವಾರಾಂತ್ಯದ ಕರ್ಫ್ಯೂನಿಂದಾಗಿ ಶನಿವಾರ, ಭಾನುವಾರ ಮೆಟ್ರೋ ಸಂಚಾರ ರದ್ದು

ಬೆಂಗಳೂರು: ವಾರಾಂತ್ಯದ ಕರ್ಫ್ಯೂನಿಂದಾಗಿ ಶನಿವಾರ, ಭಾನುವಾರ ಮೆಟ್ರೋ ಸಂಚಾರ ರದ್ದು

ಬೆಂಗಳೂರು: ರಾಜ್ಯ ಸರ್ಕಾರವು ಕೊರೊನಾ ಸೋಂಕು ಹರಡುವುದನ್ನು ತಡೆಯಲು ನೈಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಪ್ಯೂ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 7:30ವರೆಗೆ ನಮ್ಮ ಮೆಟ್ರೋ ಸಂಚಾರಿಸಲಿದೆ. ಆದರೆ ವಾರಾಂತ್ಯದ ಕರ್ಫ್ಯೂನಿಂದಾಗಿ ಶನಿವಾರ ಮತ್ತು ಭಾನುವಾರದಂದು ಮೆಟ್ರೋ ರೈಲು ಸೇವೆಯನ್ನು ರದ್ದು ಪಡಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್ ಸಿ ಎಲ್) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿ ಇರುವುದರಿಂದ ಮೆಟ್ರೋ ರೈಲು ಕಾರ್ಯಾಚರಣೆಯ ವೇಳಾಪಟ್ಟಿಯನ್ನು ದಿನಾಂಕ 04-05-2021ರವರೆಗೆ ಪರಿಷ್ಕರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಈ ಕೆಳಗಿನಂತಿದೆ ಎಂಬುದಾಗಿ ತಿಳಿಸಿದೆ.

ಬೆಂಗಳೂರು : ಕೊರೊನಾ ಇಲ್ಲದ ರೋಗಿಗಳ ಚಿಕಿತ್ಸೆಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ: ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ