ಸಿಲಿಕಾನ್ ಸಿಟಿಯಲ್ಲಿ ಬೆಡ್​ ಬ್ಲಾಕಿಂಗ್ ದಂಧೆ: ತೇಜಸ್ವಿ ಸೂರ್ಯಗೆ ಧನ್ಯವಾದ ತಿಳಿಸಿ ಕಾಲೆಳೆದ ಡಿಕೆಶಿ - BC Suddi
ಸಿಲಿಕಾನ್ ಸಿಟಿಯಲ್ಲಿ ಬೆಡ್​ ಬ್ಲಾಕಿಂಗ್ ದಂಧೆ: ತೇಜಸ್ವಿ ಸೂರ್ಯಗೆ ಧನ್ಯವಾದ ತಿಳಿಸಿ ಕಾಲೆಳೆದ ಡಿಕೆಶಿ

ಸಿಲಿಕಾನ್ ಸಿಟಿಯಲ್ಲಿ ಬೆಡ್​ ಬ್ಲಾಕಿಂಗ್ ದಂಧೆ: ತೇಜಸ್ವಿ ಸೂರ್ಯಗೆ ಧನ್ಯವಾದ ತಿಳಿಸಿ ಕಾಲೆಳೆದ ಡಿಕೆಶಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಬೆಳಕಿಗೆ ಬಂದ ಬೆಡ್ ಬ್ಲಾಕಿಂಗ್ ದಂಧೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿ ಬಿಜೆಪಿ ಸಚಿವರ ಕಾಲೆಳೆದು ವ್ಯಂಗ್ಯವಾಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ರೈಡ್ ಮಾಡಿದ ಮೇಲೆ ಬೆಂಗಳೂರಿನಲ್ಲಿ (ಖಾಸಗಿ ಆಸ್ಪತ್ರೆ ಸೇರಿದಂತೆ) 1,550 ಬೆಡ್‌ ಲಭ್ಯವಾಗಿವೆ.

ಇದಕ್ಕೂ ಮೊದಲು ಕಾಳ ಸಂತೆಯಲ್ಲಿ ಬೆಡ್ ಮಾರಾಟ ಆಗುತ್ತಿದ್ದರಿಂದ ಎಲ್ಲೂ ಬೆಡ್ ಲಭ್ಯವಿಲ್ಲದೆ ರೋಗಿಗಳು ಸಾಯುವ ಪರಿಸ್ಥಿತಿ ಇತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ಅವರು, “ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ ಮತ್ತು ಉದಯ್ ಗರುಡಾಚಾರ್ ಅವರು ತಮ್ಮದೇ ಪಕ್ಷದ ಸರ್ಕಾರ ಮತ್ತು ನಿಗಮದಿಂದ ಹಾಸಿಗೆ ಹಂಚಿಕೆಯಲ್ಲಿ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ.

ಬಿಬಿಎಂಪಿ ಯಾರ ನಿಯಂತ್ರಣದಲ್ಲಿದೆ? ತುಂಬಾ ತೊಂದರೆ ಅನುಭವಿಸುತ್ತಿರುವ ಜನರಿಗೆ ಜವಾಬ್ದಾರಿಯುತ ಬಿಜೆಪಿ ಸಚಿವರನ್ನು ಅವರು ತಕ್ಷಣ ಹೆಸರಿಸಬೇಕು” ಎಂದು ಕುಟುಕಿದ್ದಾರೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರಧಾನಿ ನಿವಾಸಕ್ಕೆ 13ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯಾ?