ಬಿಜೆಪಿ ಮುಖಂಡರ ನಿವಾಸದ ಮೇಲೆ ಉಗ್ರರ ಗುಂಡಿನ ದಾಳಿ : ಪೊಲೀಸ್ ಕಾನ್‌ಸ್ಟೆಬಲ್‌ ಮೃತ್ಯು - BC Suddi
ಬಿಜೆಪಿ ಮುಖಂಡರ ನಿವಾಸದ ಮೇಲೆ ಉಗ್ರರ ಗುಂಡಿನ ದಾಳಿ : ಪೊಲೀಸ್ ಕಾನ್‌ಸ್ಟೆಬಲ್‌ ಮೃತ್ಯು

ಬಿಜೆಪಿ ಮುಖಂಡರ ನಿವಾಸದ ಮೇಲೆ ಉಗ್ರರ ಗುಂಡಿನ ದಾಳಿ : ಪೊಲೀಸ್ ಕಾನ್‌ಸ್ಟೆಬಲ್‌ ಮೃತ್ಯು

ಶ್ರೀನಗರ: ಬಿಜೆಪಿ ಮುಖಂಡರ ನಿವಾಸದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ, ಒಬ್ಬ ಪೊಲೀಸ್‌ ಕಾನ್‌ಸ್ಟೆಬಲ್‌ ಮೃತಪಟ್ಟ ಘಟನೆ ನಗರದ ನೌಗಮ್‌ ಪ್ರದೇಶದಲ್ಲಿ ನಡೆದಿದೆ. ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮತ್ತು ಕುಪ್ವಾರಾ ಜಿಲ್ಲೆಯ ಉಸ್ತುವಾರಿ ಆಗಿರುವ ಮುಖಂಡ ಅನ್ವರ್ ಅಹ್ಮದ್ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕಾನ್‌ಸ್ಟೆಬಲ್‌ ರಮೀಜ್‌ ರಾಜಾ ಅವರನ್ನುಆಸ್ಪತ್ರೆಗೆ ಸೇರಿಸಲಾಗಿತ್ತು, ಆದರೆ ಆಸ್ಪತ್ರೆಗೆ ಬರುವ ಮೊದಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಅವರು ತಿಳಿಸಿದ್ದಾರೆ. ಈ ದಾಳಿಯನ್ನು ಬಿಜೆಪಿಯ ಕಾಶ್ಮೀರ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಮಾಧ್ಯಮ ಉಸ್ತುವಾರಿ ಮಂಜೂರ್ ಭಟ್ ಹೇಳಿದ್ದಾರೆ.

ಅಸ್ಸಾಂ ಜನತೆಯು ಕಾಂಗ್ರೆಸ್ ಮೈತ್ರಿಕೂಟಕ್ಕೆ ಕೆಂಪು ಕಾರ್ಡ್ ತೋರಿಸಿದ್ದಾರೆ: ಧಾನಿ ನರೇಂದ್ರ ಮೋದಿ

error: Content is protected !!