ಕಾಂಗ್ರೆಸ್ ಪಕ್ಷದ ದಬ್ಬಾಳಿಕೆ ಎದುರಿಸುವ ಶಕ್ತಿ ಮಸ್ಕಿ ಕ್ಷೇತ್ರದ ಕಾರ್ಯಕರ್ತರಲ್ಲಿದೆ: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ - BC Suddi
ಕಾಂಗ್ರೆಸ್ ಪಕ್ಷದ ದಬ್ಬಾಳಿಕೆ ಎದುರಿಸುವ ಶಕ್ತಿ ಮಸ್ಕಿ ಕ್ಷೇತ್ರದ ಕಾರ್ಯಕರ್ತರಲ್ಲಿದೆ: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಪಕ್ಷದ ದಬ್ಬಾಳಿಕೆ ಎದುರಿಸುವ ಶಕ್ತಿ ಮಸ್ಕಿ ಕ್ಷೇತ್ರದ ಕಾರ್ಯಕರ್ತರಲ್ಲಿದೆ: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ರಾಯಚೂರು: ಉಪಚುನಾವಣೆಯಲ್ಲಿ ಗೆಲ್ಲಲು ಬೇಕಾದ ತಂತ್ರಗಾರಿಕೆಯನ್ನ ನಮ್ಮ ಕಾರ್ಯಕರ್ತರು ಮಾಡ್ತಾರೆ. ಕಾಂಗ್ರೆಸ್ ಪಕ್ಷದ ದಬ್ಬಾಳಿಕೆ ಎದುರಿಸುವ ಶಕ್ತಿ ಮಸ್ಕಿ ಕ್ಷೇತ್ರದ ಕಾರ್ಯಕರ್ತರಲ್ಲಿದೆ. ಮಸ್ಕಿ ಕ್ಷೇತ್ರದಲ್ಲಿ ನಮ್ಮ ಪಕ್ಷ ತಳ ಮಟ್ಟದ ಸಂಘಟನಾ ಸಾಮರ್ಥ್ಯ ಹೊಂದಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

50 ಉಪಕಾಲುವೆ ವಿಚಾರವಾಗಿ ಚುನಾವಣೆಗೆ ಬಹಿಷ್ಕಾರ ಹಾಕಿದ್ರೆ ಅದು ಸಮಸ್ಯೆಗೆ ಪರಿಹಾರವಲ್ಲ. ರೈತರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ರೆ ಅವರು ವಿರೋಧ ಪಕ್ಷದ ಸಾಲಲ್ಲಿ ಕೂತ್ಕೋತಾರೆ. ಮಸ್ಕಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕ್ಷೇತ್ರದ ಜನ ಪ್ರತಾಪಗೌಡರ ಆಯ್ಕೆ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.

 

error: Content is protected !!