ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವೀಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಇಂದು ಬೆಳಗ್ಗೆ ನನಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಎಂದು ನಾನು ಈ ಮೂಲಕ ಎಲ್ಲರಿಗೂ ತಿಳಿಸುತ್ತಿದ್ದೇನೆ.
ಕೊರೊನಾ ಮಾರ್ಗಸುಚಿಯ ಅನ್ವಯ ಕೂಡಲೇ ನಾನು ಪ್ರತ್ಯೆಕ ವಾಸ ಆರಂಭಿಸಿದ್ದೇನೆ. ಸದ್ಯ ನಾನು ಮನೆಯಲ್ಲಿ ಪ್ರತ್ಯೇಕ ವಾಸದಲ್ಲಿದ್ದು, ವೈದ್ಯಕೀಯ ಆರೈಕೆಯಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೂಡಾ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡುತ್ತಿದ್ದೇನೆ. ಶೀಘ್ರದಲ್ಲೇ ನಾನು ಕರ್ತವ್ಯಕ್ಕೆ ಮರಳಲಿದ್ದೇನೆ” ಎಂದು ತಿಳಿಸಿದ್ದಾರೆ.
— Akshay Kumar (@akshaykumar) April 4, 2021