ಮುಂಬೈ: ‘ಮಿರ್ಜಾಪುರ್’ ವೆಬ್‌ ಸೀರೀಸ್‌ನಲ್ಲಿ ಲಲಿತ್ ಪಾತ್ರದಲ್ಲಿ ನಟಿಸಿ ಖ್ಯಾತಿ ಗಳಿಸಿದ್ದ ನಟ ಬ್ರಹ್ಮ ಮಿಶ್ರಾ (36) ಇಂದು ಮುಂಬೈನ ವರ್ಸೋವಾದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಿಶ್ರಾ ಅವರು ಮುಂಬೈ ನಿವಾಸದಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಮನೆಯ ಬಾತ್​ರೂಮ್​ನಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಲಾಗಿದೆ.

ಘಟನಾ ಸ್ಥಳಕ್ಕೆ ತೆರಳಿದಾಗ ಮನೆಯ ಒಳಗಿಂದ ಬಾಗಿಲು ಲಾಕ್​ ಆಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರಗೊಂಡ ಮಿರ್ಜಾಪುರ್​ ವೆಬ್ ಸರಣಿ ಹಿಟ್​ ಆಗಿ, ತಮ್ಮ ನಟನೆಯ ಮೂಲಕ ಬ್ರಹ್ಮ ಮಿಶ್ರಾ ಪ್ರೇಕ್ಷಕರ ಮನಗೆದ್ದಿದ್ದರು.