ಬೆಂಗಳೂರು : ಇಂದು ನಡೆದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚು ಮಾಡಲು ಸಮ್ಮತಿ ನೀಡಿದೆ. ಅಡ್ವೋಕೇಟ್ ಜನರಲ್ ಸಿದ್ಧಪಡಿಸಿದ ಪ್ರಮಾಣ ಪತ್ರಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಜನಸಂಖ್ಯೆಯ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಹಿಂದುಳಿದ ಸಮುದಾಯಗಳು ಮೀಸಲಾತಿಗೆ ಬೇಡಿಕೆ ಮಂಡಿಸಿವೆ. ಬೇಡಿಕೆಗೆ ಪೂರಕವಾಗಿ ಮೀಸಲಾತಿ ಪ್ರಮಾಣ ಏರಿಕೆ ಮಾಡಬೇಕಾಗಿದೆ ಎಂಬುದಾಗಿ ಅಡ್ವೋಕೇಟ್ ಜನರಲ್ ಸಿದ್ದಪಡಿಸಿದಂತ ಪ್ರಮಾಣ ಪತ್ರಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಸಂಜೆಯೊಳಗೆ ಸುಪ್ರೀಂಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸಲ್ಲಿಸಲಿದೆ.!