ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ರಿಲೀಸ್ : ಎಸ್‌ಐಟಿ ಮೇಲೆ ಗಂಭೀರ ಆರೋಪ - BC Suddi
ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ರಿಲೀಸ್ : ಎಸ್‌ಐಟಿ ಮೇಲೆ ಗಂಭೀರ ಆರೋಪ

ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ರಿಲೀಸ್ : ಎಸ್‌ಐಟಿ ಮೇಲೆ ಗಂಭೀರ ಆರೋಪ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋದಲ್ಲಿದ್ದಾರೆ ಎನ್ನಲಾದ ಯುವತಿ ಮತ್ತೊಂದು ವಿಡಿಯೋ ರಿಲೀಸ್ ಮಾಡಿದ್ದು, ತಂದೆ-ತಾಯಿಯ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ. ಅಷ್ಟೇ ಅಲ್ಲದೆ ಎಸ್‌ಐಟಿ ಮೇಲೆ ಗಂಭೀರ ಆರೋಪ ಮಾಡಿದ್ದಾಳೆ.

ಯುವತಿಯ ಮಾತು..
ನಮ್ಮ ಅಪ್ಪ, ಅಮ್ಮ ಸ್ವಇಚ್ಛೆಯಿಂದ ದೂರು ನೀಡಿಲ್ಲ ಅನ್ನೋದು ನನಗೆ ನೂರಕ್ಕೆ ನೂರರಷ್ಟು ಗೊತ್ತು. ಮಗಳು ತಪ್ಪು ಮಾಡಿಲ್ಲ ಅನ್ನೋದು ಪೋಷಕರಿಗೆ ಗೊತ್ತಿದೆ. ನನಗೆ ಅಪ್ಪ, ಅಮ್ಮನ ಸುರಕ್ಷತೆ ಮುಖ್ಯ. ಯಾವತ್ತು ಅವರು ಸೇಫ್ ಆಗಿದ್ದರೆ ಎನ್ನುವುದು ಖಚಿತವಾಗುತ್ತದೆಯೋ ಆಗ ಎಸ್‌ಐಟಿ ಮುಂದೆ ಬಂದು ಹೇಳಿಕೆ ದಾಖಲಿಸುತ್ತೇನೆ. ಇದಕ್ಕೂ ಮುನ್ನ ನಾನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಮತ್ತು ಮಹಿಳಾ ಸಂಘಟನೆಗಳು ನಮ್ಮ ತಂದೆ-ತಾಯಿಗೆ ರಕ್ಷಣೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ.

ನನಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ನಾನು ಮಾ. 12ರಂದು ವೀಡಿಯೋ ಹೇಳಿಕೆಯನ್ನ ಎಸ್‌ಐಟಿಗೆ ನೀಡಿದ್ದೆ. ಆದರೆ ಮಾ.13 ರಂದು ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸಿದ ಅರ್ಧ ಗಂಟೆಯಲ್ಲಿ ನನ್ನ ವಿಡಿಯೋ ಹೊರಗೆ ಬಿಡುತ್ತಾರೆ. ಎಸ್‌ಐಟಿ ಯಾರ ಪರ ಕೆಲಸ ಮಾಡುತ್ತಿದ್ದಾರೆ ಎನ್ನುದೇ ಅರ್ಥವಾಗುತ್ತಿಲ್ಲ. ಅಧಿಕಾರಿಗಳು ಯಾರನ್ನು ಸೇಫ್ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ ಎಂದು ಯುವತಿ ದೂರಿದ್ದಾಳೆ.

 

error: Content is protected !!