ಸಿಡಿ ಪ್ರಕರಣದ ಯುವತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಸಿದ್ಧತೆ: ಬೌರಿಂಗ್ ಆಸ್ಪತ್ರೆಗೆ ಬಿಗಿ ಭದ್ರತೆ - BC Suddi
ಸಿಡಿ ಪ್ರಕರಣದ ಯುವತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಸಿದ್ಧತೆ: ಬೌರಿಂಗ್ ಆಸ್ಪತ್ರೆಗೆ ಬಿಗಿ ಭದ್ರತೆ

ಸಿಡಿ ಪ್ರಕರಣದ ಯುವತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಸಿದ್ಧತೆ: ಬೌರಿಂಗ್ ಆಸ್ಪತ್ರೆಗೆ ಬಿಗಿ ಭದ್ರತೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದ ಯುವತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಸಿದ್ಧತೆ ನಡೆದಿದೆ. ನಗರದ ಬೌರಿಂಗ್ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಯುವತಿಯ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಆಸ್ಪತ್ರೆಯ ವೈದ್ಯರ ತಂಡ ಸಿದ್ಧತೆ ನಡೆಸಿಕೊಂಡಿದೆ.

ಇತ್ತ ನ್ಯಾಯಾಧೀಶರ ಮುಂದೆ ಕಳೆದ ನಿಮಿಷಗಳಿಂದ ಯುವತಿ ಹೇಳಿಕೆ ನೀಡಿದ್ದಾಳೆ. ಈ ಹೇಳಿಕೆಯನ್ನು ಪ್ರತ್ಯೇಕ ಎರಡು ಕ್ಯಾಮೆರಾಗಳ ಮೂಲಕ ದಾಖಲಿಸಿಕೊಳ್ಳಲಾಗಿದೆ. ವಸಂತನಗರದಲ್ಲಿರುವ ಗುರುನಾನಕ್ ಭವನದಲ್ಲಿ ಯುವತಿ ಹೇಳಿಕೆ ನೀಡಿದ್ದು ಗುರುನಾನಕ್ ಭವನದ ಮೂರು ದ್ವಾರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಕೆನಂತರ ಯುವತಿ ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಆಗಮಿಸುತ್ತಿದ್ದಾಳೆ.

error: Content is protected !!