ಸಿಡಿ ಪ್ರಕರಣ: ಕುಮಾರಸ್ವಾಮಿ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು.! - BC Suddi
ಸಿಡಿ ಪ್ರಕರಣ: ಕುಮಾರಸ್ವಾಮಿ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು.!

ಸಿಡಿ ಪ್ರಕರಣ: ಕುಮಾರಸ್ವಾಮಿ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು.!

 

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಇದೀಗ ಎಸಿಬಿಯಲ್ಲಿ ದೂರು ದಾಖಲಾಗಿದೆ. ಏಕೆಂದರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಹೇಳಿಕೆ ನೀಡಿದ್ದರಿಂದ.!

5 ಕೋಟಿ ವ್ಯವಹಾರ ಹೇಳಿಕೆಗೆ ಸಂಬಂಧಿಸಿದಂತೆ ವಕೀಲರಾದ ಮಂಜುನಾಥ್ ಹಾಗೂ ಸಿದ್ದೇಶ್ ಎಂಬುವವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ.

ಸಿಡಿ ಪ್ರಕರಣದಲ್ಲಿ 5 ಕೋಟಿ ಹಣದ ವ್ಯವಹಾರ ನಡೆದಿದೆ ಎಂದು ಗೊತ್ತಿದ್ದರೂ ಸದನದಲ್ಲಿ ಪ್ರಸ್ತಾಪಿಸಿಲ್ಲ. ಯಾವುದೇ ತನಿಖಾ ಸಂಸ್ಥೆಗೆ ಮಾಹಿತಿ ನೀಡಿಲ್ಲ. ಕೇವಲ ಮಾಧ್ಯಮಗಳ ಮುಂದೆ ಹೇಳಿಕೆ ನೀಡಲಾಗುತ್ತಿದೆ. ಡೀಲ್ ನಡೆದಿದೆ ಅಂದ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಇಷ್ಟೊಂದು ದೊಡ್ಡ ಮೊತ್ತದ ಹಣದ ಮೂಲವೇನು ಎಂದು ಹೇಳಿ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.!

error: Content is protected !!