ಅವರು ನನ್ನ ಪೋಷಕರ ತಲೆ ತೆಗೆಯಬಹುದು: ಮತ್ತೊಂದು ವಿಡಿಯೋ ಹರಿಬಿಟ್ಟ ಸಿ.ಡಿ ಹುಡುಗಿ - BC Suddi
ಅವರು ನನ್ನ ಪೋಷಕರ ತಲೆ ತೆಗೆಯಬಹುದು: ಮತ್ತೊಂದು ವಿಡಿಯೋ ಹರಿಬಿಟ್ಟ ಸಿ.ಡಿ ಹುಡುಗಿ

ಅವರು ನನ್ನ ಪೋಷಕರ ತಲೆ ತೆಗೆಯಬಹುದು: ಮತ್ತೊಂದು ವಿಡಿಯೋ ಹರಿಬಿಟ್ಟ ಸಿ.ಡಿ ಹುಡುಗಿ

ಬೆಂಗಳೂರು: ಸೆಕ್ಸ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಎನ್ನಲಾದ ಯುವತಿ ಮತ್ತೊಂದು ಹೇಳಿಕೆಯ ವಿಡಿಯೋ ಹರಿಬಿಟ್ಟಿದ್ದಾಳೆ.

ರಮೇಶ್ ಜಾರಕಿಹೊಳಿ ಒಂದೇ ದಿನದಲ್ಲಿ ಸರ್ಕಾರ ಬೀಳಿಸುತ್ತೇನೆ ಎಂದು ಹೇಳುತ್ತಾರೆ. ಎಷ್ಟು ಹಣ ಖರ್ಚಾದರೂ ಪರವಾಗಿಲ್ಲ ಎಂದು ಹೇಳುತ್ತಾರೆ. ಎಲ್ಲರನ್ನೂ ಜೈಲಿಗೆ ಹಾಕಿಸುವುದಾಗಿಯೂ ರಮೇಶ್ ಹೇಳ್ತಾರೆ. ಅವರು ಈ ರೀತಿಯಾಗಿ ಹೇಳುತ್ತಾರೆಂದರೆ ಏನು ಅರ್ಥ? ಜನರೇ ಈ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಎಷ್ಟು ಹಣ ಬೇಕಾದರೂ ಖರ್ಚು ಮಾಡುತ್ತೇನೆಂದು ಹೇಳ್ತಾರೆ. ನಮ್ಮ ತಂದೆ, ತಾಯಿ ತಲೆ ಬೇಕಿದ್ದರೂ ತೆಗೆಯಬಹುದು.

ಮುಂದೊಂದು ದಿನ ನನ್ನನ್ನೂ ಸಾಯಿಸಬಹುದು. ಏನಾಗುತ್ತದೆಂದು ಯಾರಿಗೂ ಗೊತ್ತಿಲ್ಲ. ನಾನು ಹೇಳಿಕೆ ನೀಡಬೇಕಾದರೆ ಪೋಷಕರು ಇರಬೇಕು. ನನ್ನ ಕಣ್ಣು ಮುಂದೆ ತಂದೆ, ತಾಯಿ, ಅಜ್ಜಿ ಸಹೋದರಿರಬೇಕು.‘ನನ್ನ ಪೋಷಕರಿಗೆ ಯಾವುದೇ ರೀತಿಯ ರಕ್ಷಣೆ ಇಲ್ಲ. ‘ರಮೇಶ್ ಜಾರಕಿಹೊಳಿ ಹೆಸರು ಬರೆದು ಸಾಯಬೇಕೆನಿಸ್ತಿದೆ’. ಆ ಮಟ್ಟಿಗೆ ನನಗೆ ಕಿರುಕುಳ ನೀಡಲಾಗುತ್ತಿದೆ. ದಯವಿಟ್ಟು ನನಗೆ ನ್ಯಾಯ ಕೊಡಿಸಿ ಎಂದಿದ್ದಾಳೆ.

 

ಅತಿದೊಡ್ಡ ಕಾರ್ಪೋರೇಟ್ ವಿವಾದಕ್ಕೆ ತೆರೆ ಎಳೆದ ಸುಪ್ರೀಂ ಕೋರ್ಟ್

error: Content is protected !!