ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ರೋಡ್ ಶೋ..! - BC Suddi
ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ರೋಡ್ ಶೋ..!

ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ರೋಡ್ ಶೋ..!

ಕೋಲ್ಕತ್ತಾ: ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಖರಗಪುರ್ ನಲ್ಲಿ ಬಿಜೆಪಿ ಅಭ್ಯರ್ಥಿ ಹಿರನ್ ಚಟರ್ಜಿ ಪರ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ನಡೆಸಿದರು. ಈ ರೋಡ್ ಶೋನಲ್ಲಿ ನೆರೆದಿರುವ ಜನರು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಭವ್ಯ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಗೆಲುವು ಸಾಧಿಸಿದ ನಂತರ ಬಂಗಾಳವನ್ನು ಬಂಗಾರವನ್ನಾಗಿ ಪರಿವರ್ತಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶ್ವಾಸನೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಿಜವಾದ ಬದಲಾವಣೆ ತರುವಲ್ಲಿ ಭಾರತೀಯ ಜನತಾ ಪಕ್ಷವು ಯಶಸ್ವಿಯಾಗಲಿದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರದಲ್ಲಿ ಬಂಗಾರದ0ತಾ ಬಂಗಾಳವನ್ನು ರೂಪಿಸಲಿದೆ ಎಂದು ಭರವಸೆ ನೀಡುತ್ತೇವೆ ಎಂದು ಅಮಿತ್ ಶಾ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಖರಗಪುರ್ ದಲ್ಲಿರುವ ಪ್ರೇಮಹರಿ ಭವನದಿಂದ ಮಲಂಚಾ ಪೆಟ್ರೋಲ್ ಬಂಕ್ ವರೆಗೂ ಸರಿಸುಮಾರು ಒಂದು ಕಿಲೋ ಮೀಟರ್ ವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದರು.

ಈ ವೇಳೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳದ ಚುನಾವಣಾ ಉಸ್ತುವಾರಿ ವಿಜಯ್ ವರ್ಗೀಯಾ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಜೊತೆಗಿದ್ದರು.

 

error: Content is protected !!