ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ ಸುಪ್ರೀಂ ನೋಟಿಸ್, ಯಾಕೆ ಗೊತ್ತಾ..? - BC Suddi
ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ ಸುಪ್ರೀಂ ನೋಟಿಸ್, ಯಾಕೆ ಗೊತ್ತಾ..?

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ ಸುಪ್ರೀಂ ನೋಟಿಸ್, ಯಾಕೆ ಗೊತ್ತಾ..?

ನವದೆಹಲಿ:ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸಬೇಕೆಂದು ಕೋರಿ ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರಿಂ ಕೋರ್ಟ್ ನಲ್ಲಿ ನಡೆಯಿತು. ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸುವ ವಿಚಾರವಾಗಿ ಅಭಿಪ್ರಾಯ ತಿಳಿಸುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಉತ್ತರ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್ ನೀಡಿದೆ. ಒಂದು ಚುನಾವಣೆಯನ್ನು ಉಲ್ಲೇಖಿಸಿ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಈ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು, ಈ ಅರ್ಜಿಗೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಕಾನೂನು ಮತ್ತು ನ್ಯಾಯ ಸಚಿವಾಲಯ ಮತ್ತು ಇಸಿಗೆ ನೋಟಿಸ್ ಜಾರಿ ಮಾಡಿದೆ.

ಆದರೆ, ಅಭ್ಯರ್ಥಿಗಳಿಗಿಂತ ಹೆಚ್ಚು ಮತಗಳನ್ನು ಪಡೆದ ಕಾರಣ ಚುನಾವಣಾ ಫಲಿತಾಂಶ ಅನೂರ್ಜಿತಗೊಂಡರೆ ಸೀಟು ಖಾಲಿಯಿರುವ ಬಗ್ಗೆ ಎಸ್ ಸಿ ಆತಂಕ ವ್ಯಕ್ತಪಡಿಸಿದೆ. ಒಂದು ಕ್ಷೇತ್ರದಲ್ಲಿ ಗರಿಷ್ಠ ಮತಗಳು’Nota’ ಪರವಾಗಿದ್ದರೆ ಚುನಾವಣಾ ಫಲಿತಾಂಶ ಅನೂರ್ಜಿತಗೊಳಿಸಿ ಹೊಸದಾಗಿ ಚುನಾವಣೆ ನಡೆಸುವಂತೆ ಚುನಾವಣಾ ಸಮಿತಿಗೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ಬಗ್ಗೆ ವಿಚಾರಣೆ ನಡೆದಿದೆ.

 

 

error: Content is protected !!