ರಾಯಚೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ರಾಸಾಯನಿಕ ಸೋರಿಕೆ- ಓರ್ವ ಸಾವು, ಮೂವರ ಸ್ಥಿತಿ ಗಂಭೀರ - BC Suddi
ರಾಯಚೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ರಾಸಾಯನಿಕ ಸೋರಿಕೆ- ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ರಾಯಚೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ರಾಸಾಯನಿಕ ಸೋರಿಕೆ- ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ರಾಯಚೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ರಾಸಾಯನಿಕ ಸೋರಿಕೆಯಾಗಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ತಾಲೂಕಿನ ಚಿಕ್ಕಸೂಗೂರು ಗ್ರಾಮದ ಬಳಿಯ ಜೆ.ವೈ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ.

ಪಿ.ರಂಗಡು(28) ಮೃತ ಕಾರ್ಮಿಕ. ವೀರೇಶ್, ತಿಮ್ಮಪ್ಪ, ಶ್ರೀನಿವಾಸ್ ರೆಡ್ಡಿ ಎಂಬವರ ಸ್ಥಿತಿ ಗಂಭೀರವಾಗಿದೆ. ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಿಂದಾಗಿ ಫ್ಯಾಕ್ಟರಿ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಎಂದಿನಂತೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಮಿಕಲ್ ಸೋರಿಕೆಯಾಗಿದೆ. ಪರಿಣಾಮ ರಂಗಡು ಎಂಬ ಕಾರ್ಮಿಕ ಮೂರ್ಛೆ ಬಂದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ!

error: Content is protected !!