ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾದ ಮುಖ್ಯಮಂತ್ರಿ ಯಡಿಯೂರಪ್ಪ - BC Suddi
ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾದ ಮುಖ್ಯಮಂತ್ರಿ ಯಡಿಯೂರಪ್ಪ

ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾದ ಮುಖ್ಯಮಂತ್ರಿ ಯಡಿಯೂರಪ್ಪ

ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಎಂ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ತಿಳಿದುಬಂದಿದೆ. ಬುಧವಾರ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿಎಸ್ ವೈ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇದರಿಂದ ಅವರು ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ ಹೋಟೆಲ್ ಗೆ ತೆರಳಿ ವಿಶ್ರಾಂತಿ ಪಡೆದಿದ್ದರು.

ಆ ಬಳಿಕ ಬೆಂಗಳೂರಿಗೆ ಹಿಂತಿರುಗಿದ್ದ ಅವರು ಬೆಳಗ್ಗೆ ತಮ್ಮ ನಿವಾಸದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಜೊತೆಗೆ ತುರ್ತು ಸಭೆ ನಡೆಸಿದ್ದರು. ನಂತರ ಆಸ್ಪತ್ರೆಗೆ ತೆರಳಿದ್ದು, ಆಸ್ಪತ್ರೆಯಲ್ಲಿಯೇ ಎರಡು ದಿನಗಳ ಕಾಲ ಉಳಿದುಕೊಳ್ಳಲು ತೀರ್ಮಾನಿಸಿದ್ದಾರೆ.

ಈ ವಾರ ಬಿಗ್ ಬಾಸ್ ಗೆ ಕಿಚ್ಚ ಗೈರು : ಹುಷಾರಿಲ್ಲ ಟ್ವೀಟ್ ಮಾಡಿದ ಸುದೀಪ್