ಇಂದು ಸಿಎಂ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಿ ಹಲವು ಕಠಿಣ ಕ್ರಮಗಳನ್ನು ಜಾರಿ ಮಾಡುವ ಸಾಧ್ಯತೆ..! - BC Suddi
ಇಂದು ಸಿಎಂ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಿ ಹಲವು ಕಠಿಣ ಕ್ರಮಗಳನ್ನು ಜಾರಿ ಮಾಡುವ ಸಾಧ್ಯತೆ..!

ಇಂದು ಸಿಎಂ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಿ ಹಲವು ಕಠಿಣ ಕ್ರಮಗಳನ್ನು ಜಾರಿ ಮಾಡುವ ಸಾಧ್ಯತೆ..!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಿನ್ನೆ (ಭಾನುವಾರ) ರಾಜ್ಯದಲ್ಲಿ 3 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಸಂಜೆ 5 ಗಂಟೆಗೆ ಕಂದಾಯ ಸಚಿವ ಆರ್‌.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್.

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಅವರು ಸಭೆ ನಡೆಸಲಿದ್ದಾರೆ. ಮಾರ್ಚ್ 20 ರಂದು 9,044 ಇದ್ದ ಸಕ್ರಿಯ ಕೇಸ್‌ಗಳು ಇದೀಗ 21 ಸಾವಿರ ಗಡಿ ದಾಟಿದೆ. ಪ್ರಸ್ತುತ ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲು ಆರೋಗ್ಯ ಇಲಾಖೆ ಚಿಂತಿಸಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅನೇಕ ನಿಯಮಗಳನ್ನು ರೂಪಿಸಿದ್ದರೂ, ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದರೂ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಸಿಗದೇ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸುವ ಸಾಧ್ಯತೆಯಿದೆ.

ರಾಜ್ಯದ ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೊನಾ ಕಂಟ್ರೋಲ್ ಮಾಡೋದಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಂದು ಸಿಎಂ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಿ ಹಲವು ಕಠಿಣ ಕ್ರಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ. ನೆರೆಯ ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ 38 ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದು, ಹಲವು ನಗರಗಳನ್ನು ಸೀಲ್​ಡೌನ್ ಮಾಡಲಾಗಿದೆ. ಅದೇ ಮಾದರಿಯಲ್ಲಿ ರಾಜಧಾನಿಯ ಕೆಲ ವಾರ್ಡ್‌ಗಳನ್ನು ಸೀಲ್‌ಡೌನ್ ಮಾಡುವ ಬಹುತೇಕ ಸಾಧ್ಯತೆ ಇದೆ. ಕ್ಲಸ್ಟರ್ ಮಾದರಿಯ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಸಿನಿಮಾ ಥಿಯೇಟರ್‌ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಜನ ಗುಂಪು ಸೇರುವುದನ್ನು ತಪ್ಪಿಸಲು ಈಗಾಗಲೇ ಹಬ್ಬಗಳಿಗೆ ನಿಷೇಧ ಹೇರಿರುವ ಸರ್ಕಾರ, ಸಿನಿಮಾ ಥಿಯೇಟರ್‌ಗಳಲ್ಲಿ ಶೇಕಡಾ 50ರಷ್ಟು ಸೀಟ್ ಅಕ್ಯುಪೆನ್ಸಿ ಹೇರುವ ಸಾಧ್ಯತೆ ಇದೆ.

error: Content is protected !!