ಈಗಾಗಲೇ ಹಾಲಿ ಸಿಎಂ ಮಮತಾ ಬ್ಯಾನರ್ಜಿ ಸೋಲಿನ ಭೀತಿ ಶುರುವಾಗಿದೆ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ - BC Suddi
ಈಗಾಗಲೇ ಹಾಲಿ ಸಿಎಂ ಮಮತಾ ಬ್ಯಾನರ್ಜಿ ಸೋಲಿನ ಭೀತಿ ಶುರುವಾಗಿದೆ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ

ಈಗಾಗಲೇ ಹಾಲಿ ಸಿಎಂ ಮಮತಾ ಬ್ಯಾನರ್ಜಿ ಸೋಲಿನ ಭೀತಿ ಶುರುವಾಗಿದೆ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿ ಈ ಬಾರಿ ನಂದಿಗ್ರಾಮ ಕ್ಷೇತ್ರದಿಂದ ಸೋಲೋದು ಗ್ಯಾರಂಟಿ. ಈಗಾಗಲೇ ಅವರಿಗೆ ಸೋಲಿನ ಭೀತಿ ಶುರುವಾಗಿದೆ. ಈ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಸುವೇಂದು ಅಧಿಕಾರಿ ಗೆದ್ದೇ ಗೆಲ್ಲುತ್ತಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟುಹೋಗಿದೆ. ಮಹಿಳೆಯರ ,ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಜಲ್ಪೈಗುರಿಯಲ್ಲಿ ಇಬ್ಬರು ಬುಡಕಟ್ಟು ಕುಟುಂಬದ ಬಾಲಕಿಯರ ಮೇಲೆ ಅತ್ಯಾಚಾರ ನಡೆದರು ಕೂಡ ಅರೋಪಿಗಳ ವಿರುದ್ಧ ಯಾವುದೇ ರೀತಿಯ ಪ್ರಕರಣ ದಾಖಲಿಸಿಕೊಂಡಿಲ್ಲ. ಇದನ್ನೆಲ್ಲ ನೋಡುತ್ತಿದ್ದರೆ ಇಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ನಡ್ಡಾ ಆರೋಪಿಸಿದ್ದಾರೆ.

ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ

error: Content is protected !!