ಕಾಮೆಡ್-ಕೆ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟ..! - BC Suddi
ಕಾಮೆಡ್-ಕೆ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟ..!

ಕಾಮೆಡ್-ಕೆ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟ..!

 

ಬೆಂಗಳೂರು : ರಾಜ್ಯದಲ್ಲಿನ ಖಾಸಗಿ ಕಾಲೇಜುಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಭರ್ತಿಗಾಗಿ ನಡೆಸಲಾಗುವಂತ ಕಾಮೆಡ್-ಕೆ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ. ಜೂನ್ 20ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಕಾಮೆಡ್-ಕೆ ತಿಳಿಸಿದೆ.

ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕಾಮೆಡ್-ಕೆ ಕಾರ್ಯಕಾರಿ ಕಾರ್ಯದರ್ಶಿ ಡಾ.ಕುಮಾರ್ ಅವರು, ಈ ಬಾರಿಯ ಕಾಮೆಡ್-ಕೆ ಪರೀಕ್ಷೆಯನ್ನು ಜೂನ್ 20ರಂದು ನಡೆಸಲಾಗುತ್ತದೆ. 150ಕ್ಕೂ ಹೆಚ್ಚು ನಗರಗಳು, 400ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಕಾಮೆಡ್-ಕೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಜೂನ್ 20ರಂದು ನಡೆಯಲಿರುವಂತ ಕಾಮೆಡ್-ಕೆ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳು ಮಾರ್ಚ್ 22 ರಿಂದ ಮೇ.20ರವರೆಗೆ www.comedk.org ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂಬುದಾಗಿ ಮಾಹಿತಿ ನೀಡಿದರು.

error: Content is protected !!