ಬೆಂಗಳೂರು: 4,000 ಕೋಟಿ ರೂ. ಐಎಂಎ ಹಗರಣ: ರೋಷನ್ ಬೇಗ್ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಲ್ಲಿಕೆ - BC Suddi
ಬೆಂಗಳೂರು: 4,000 ಕೋಟಿ ರೂ. ಐಎಂಎ ಹಗರಣ: ರೋಷನ್ ಬೇಗ್ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: 4,000 ಕೋಟಿ ರೂ. ಐಎಂಎ ಹಗರಣ: ರೋಷನ್ ಬೇಗ್ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: 4,000 ಕೋಟಿ ರೂ. ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದ್ದು, ಅದರಲ್ಲಿ ಅಂದಿನ ಐಎಂಎ ಗ್ರೂಪ್‌ನ ಎಂಡಿ ಮನ್ಸೂರ್ ಖಾನ್, ರೋಷನ್ ಬೇಗ್ ಅವರ ಕಂಪನಿಯ ದಾನಿಶ್ ಪಬ್ಲಿಕೇಶನ್ಸ್ ಮತ್ತು ಇತರ ಹೆಸರುಗಳನ್ನು ನಮೂದಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಿಬಿಐ ವಕ್ತಾರ ಆರ್.ಸಿ.ಜೋಶಿ, “ಪ್ರಕರಣದ ಆರೋಪಿ ಮಾಜಿ ಸಚಿವರು ಚುನಾವಣಾ ವೆಚ್ಚಕ್ಕಾಗಿ ಐಎಂಎ ನಿಧಿಯಿಂದ ಹಲವಾರು ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ತಮ್ಮ ಸಂಸ್ಥೆಯ ನೌಕರರ ವೇತನ ಸೇರಿದಂತೆ ದಿನನಿತ್ಯದ ಖರ್ಚಿಗೆ ಈ ಸಂಸ್ಥೆಯ ನಿಧಿಯನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಆರೋಪಿಯು ತನ್ನ ಕ್ಷೇತ್ರದಲ್ಲಿ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹಣವನ್ನು ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ” ಎಂದು ತಿಳಿಸಲಾಗಿದೆ.

ದೇಶದ ಪ್ರಧಾನ ನಾಯಕ ತೆಗೆದುಕೊಳ್ಳುವ ನಿರ್ಧಾರಕ್ಕೆ, ಅವರು ಹೋಗುವ ದಾರಿಗೆ ನಾವೂ ಬದ್ಧರಾಗಿಬೇಕು : ಸಂಜಯ್ ರಾವತ್