ಬೆಂಗಳೂರು : ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಮಾತ್ರ ಪ್ರೇಕ್ಷಕರಿಗೆ ಅವಕಾಶ ನೀಡುವ ಸಂಬಂಧ ಇಂದು ಚರ್ಚೆ ನಡೆಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಮಾತ್ರ ಪ್ರೇಕ್ಷಕರಿಗೆ ಅವಕಾಶ ನೀಡುವ ಸಂಬಂಧ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ಜನರು ಎಚ್ಚರಿಕೆಯಿಂದ ಇರಿ, ನಿರ್ಲಕ್ಷ್ಯ ಮಾಡಬೇಡಿ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಳವಾಗುತ್ತಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಎಂದು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.