ಕೊರೊನಾ ಹಿನ್ನಲೆ : ಭಾರತದಿಂದ ನ್ಯೂಜಿಲೆಂಡ್‌ಗೆ ಬರುವವರಿಗೆ ತಾತ್ಕಾಲಿಕ ನಿರ್ಬಂಧ - BC Suddi
ಕೊರೊನಾ ಹಿನ್ನಲೆ : ಭಾರತದಿಂದ ನ್ಯೂಜಿಲೆಂಡ್‌ಗೆ ಬರುವವರಿಗೆ ತಾತ್ಕಾಲಿಕ ನಿರ್ಬಂಧ

ಕೊರೊನಾ ಹಿನ್ನಲೆ : ಭಾರತದಿಂದ ನ್ಯೂಜಿಲೆಂಡ್‌ಗೆ ಬರುವವರಿಗೆ ತಾತ್ಕಾಲಿಕ ನಿರ್ಬಂಧ

ನ್ಯೂಜಿಲೆಂಡ್: ಭಾರತದಿಂದ ನ್ಯೂಜಿಲೆಂಡ್‌ಗೆ ಬಂದವರಲ್ಲಿ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಭಾರತದಿಂದ ಬರುವವರಿಗೆ ನ್ಯೂಜಿಲೆಂಡ್ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ ಎಂದು ತಿಳಿದು ಬಂದಿದೆ.

ಈ ಕುರಿತು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡೆನ್ ಅವರು ಕ್ರಮ ಕೈಗೊಂಡಿದ್ದು, ಭಾರತದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಪ್ರಜೆಗಳನ್ನೂ ಒಳಗೊಂಡಂತೆ ಭಾರತದಿಂದ ನ್ಯೂಜಿಲೆಂಡ್‌ಗೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿರುವುದಾಗಿ ತಿಳಿಸಿದ್ದಾರೆ.

ಇನ್ನು ಏಪ್ರಿಲ್ 11ರಿಂದ ಈ ನಿರ್ಬಂಧ ಜಾರಿಗೆ ಬರಲಿದ್ದು, ಏಪ್ರಿಲ್ 28ರವರೆಗೂ ಮುಂದುವರೆಯುವುದಾಗಿ ತಿಳಿದುಬಂದಿದೆ.

ಭಾರತದಲ್ಲಿ ಮಂಗಳವಾರ 1,15,736 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಹೆತ್ತ ತಾಯಿಯೇ ತನ್ನ ಮೂರು ವರ್ಷದ ಮಗಳನ್ನು ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ: ಕಾರಣ ಎನು ಗೊತ್ತಾ..?

error: Content is protected !!