ದೇಶದಲ್ಲಿ 24 ಗಂಟೆಗಳಲ್ಲಿ 1.61 ಲಕ್ಷ ಜನರಿಗೆ ಕೊರೊನಾ ದೃಢ- 879 ಮಂದಿ ಬಲಿ - BC Suddi
ದೇಶದಲ್ಲಿ 24 ಗಂಟೆಗಳಲ್ಲಿ 1.61 ಲಕ್ಷ ಜನರಿಗೆ ಕೊರೊನಾ ದೃಢ- 879 ಮಂದಿ ಬಲಿ

ದೇಶದಲ್ಲಿ 24 ಗಂಟೆಗಳಲ್ಲಿ 1.61 ಲಕ್ಷ ಜನರಿಗೆ ಕೊರೊನಾ ದೃಢ- 879 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,61,736 ಜನರಿಗೆ ಸೋಂಕು ದೃಢಪಟ್ಟಿದೆ. ಇದೇ ವೇಳೆ 879 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ. ಸದ್ಯ 12,64,698 ಪ್ರಕರಣಗಳು ಸಕ್ರಿಯವಾಗಿದ್ದು, ಸಾವಿನ ಸಂಖ್ಯೆ 1,71,058ಕ್ಕೆ ತಲುಪಿದೆ. ಸೋಮವಾರ ಚೇತರಿಸಿಕೊಂಡ 97,168 ಪ್ರಕರಣಗಳೂ ಸೇರಿ ಇದುವರೆಗೆ ಒಟ್ಟು 1,22,53,697 ಸೋಂಕಿತರು ಗುಣಮುಖರಾಗಿದ್ದಾರೆ.

ಅತಿಹೆಚ್ಚು ಪ್ರಕರಣಗಳು ವರದಿಯಾದ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 5,66,278 ಸಕ್ರಿಯ ಪ್ರಕರಣಗಳು ಇವೆ. ಉಳಿದಂತೆ ಛತ್ತೀಸಗಡ 98,856, ಉತ್ತರ ಪ್ರದೇಶ 81,576, ಕರ್ನಾಟಕ 76,004, ಕೇರಳ 47,914 ಮತ್ತು ತಮಿಳುನಾಡಿನಲ್ಲಿ 46,308 ಜನರಿಗೆ ಕೊರೊನಾ ದೃಢಪಟ್ಟಿದೆ.

ಬೆಂಗಳೂರು: ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದ ಬಿ.ಎಸ್.ಯಡಿಯೂರಪ್ಪ