ಮುಂಬೈ: ಬಹುಭಾಷಾ ನಟಿ ಹಾಗೂ ರಾಜಕಾರಣಿ ನಗ್ಮಾ ಅವರು ಕೇವಲ 6 ದಿನಗಳ ಹಿಂದಷ್ಟೇ ಕೊರೊನಾ ಲಸಿಕೆ ಪಡೆದಿದ್ದರು. ಈಗ ಅವರಿಗೆ ಕೊರೊನಾ ಸೋಂಕು ತಗುಲಿದೆ.
46 ವರ್ಷ ವಯಸ್ಸಿನ ನಗ್ಮಾ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಕೋವಿಡ್ 19 ಮೊದಲನೇ ಡೋಸ್ ಲಸಿಕೆ ತೆಗೆದುಕೊಂಡಿದ್ದೆ. ಇದೀಗ ಮತ್ತೆ ಕೊರೊನಾ ಟೆಸ್ಟ್ ಮಾಡಿಸಿಕೊಂಡಾಗ ಪಾಸಿಟಿವ್ ಬಂದಿದೆ. ಸದ್ಯ ಹೋಂ ಕ್ವಾರಂಟೈನ್ ಆಗಿದ್ದೇನೆ. ಸುಮಾರು ನಾಲ್ಕೈದು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.