ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ: 2566 ಮಂದಿಗೆ ಸೋಂಕು ದೃಢ, 13 ಜನ ಬಲಿ - BC Suddi
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ: 2566 ಮಂದಿಗೆ ಸೋಂಕು ದೃಢ, 13 ಜನ ಬಲಿ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ: 2566 ಮಂದಿಗೆ ಸೋಂಕು ದೃಢ, 13 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಬ್ಬರ ಜೋರಾಗಿದ್ದು, ಇಂದು ಕೂಡ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 2,566 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 13 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 9,81,044 ಜನರಿಗೆ ಸೋಂಕು ತಗುಲಿದ್ದು, 12,484 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,207 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,48,988ಕ್ಕೆ ಏರಿಕೆಯಾಗಿದೆ. ಇನ್ನು 19,553 ಸಕ್ರಿಯ ಪ್ರಕರಣಗಳಿವೆ.

ಕೊರಗಜ್ಜ ದೈವದ ಕೋಲದಲ್ಲಿ ನಡೆಯಿತು ಪವಾಡ! ಬೆಚ್ಚಿ ಬಿದ್ದ ಸಾವಿರಾರು ಭಕ್ತರು

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 1,490 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,24,349ಕ್ಕೆ ಏರಿಕೆಯಾಗಿದೆ. 632 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,06,449ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 4,572 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 11,520 ಸಕ್ರಿಯ ಪ್ರಕರಣಗಳಿವೆ.

ಧಾರವಾಡ: ಜಿಲ್ಲೆಯಲ್ಲಿಂದು 31 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22,737ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 12 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 21,917ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 625 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿಂದು 72 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 35,455ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 49 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 34,117ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 740 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿಂದು 210 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 24,790ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 63 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 23,858ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 190 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

error: Content is protected !!