ದೇಶದಲ್ಲಿ ಕೊರೊನಾ ವೈರಸ್ ಆರ್ಭಟ : ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್​ ನೀಡಬೇಕು: ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡ ಸೋನಿಯಾ - BC Suddi
ದೇಶದಲ್ಲಿ ಕೊರೊನಾ ವೈರಸ್ ಆರ್ಭಟ : ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್​ ನೀಡಬೇಕು: ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡ ಸೋನಿಯಾ

ದೇಶದಲ್ಲಿ ಕೊರೊನಾ ವೈರಸ್ ಆರ್ಭಟ : ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್​ ನೀಡಬೇಕು: ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡ ಸೋನಿಯಾ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೇ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಟ್ವೀಟರ್​ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿರುವ ಸೋನಿಯಾ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಎಚ್ಚೆತ್ತುಕೊಂಡು ತಮ್ಮ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದಿದ್ದಾರೆ.

ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್​ ನೀಡಬೇಕು ಎಂದಿರುವ ಸೋನಿಯಾ, ಲಸಿಕೆ ವೇಗವಾಗಿ ಉತ್ಪಾದನೆ ಮಾಡಲು ಕಡ್ಡಾಯ ಪರವಾನಗಿ ನೀಡಬೇಕು ಎಂದಿದ್ದಾರೆ. ಡೆಡ್ಲಿ ವೈರಸ್​ ಕೋವಿಡ್​ ಬಿಕ್ಕಟ್ಟು ಎದುರಿಸಲು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದಿರುವ ಸೋನಿಯಾ, ಅದರಲ್ಲಿ ಯಾವುದೇ ರೀತಿಯ ರಾಜಕೀಯ ತರಬಾರದು ಎಂದು ಹೇಳಿದ್ದಾರೆ.

ಇಂದು ಪಂಚ ರಾಜ್ಯಗಳ ಫಲಿತಾಂಶ : ಎಲ್ಲರ ಕಣ್ಣು ಪ.ಬಂಗಾಳದ ಮೇಲೆ ..!