ಚೆನ್ನೈ ಸೂಪರ್ ಕಿಂಗ್ಸ್‌ ಪಾಳಯದಲ್ಲೂ ಕೊರೋನಾ ವೈರಸ್ ಭೀತಿ - BC Suddi
ಚೆನ್ನೈ ಸೂಪರ್ ಕಿಂಗ್ಸ್‌ ಪಾಳಯದಲ್ಲೂ ಕೊರೋನಾ ವೈರಸ್ ಭೀತಿ

ಚೆನ್ನೈ ಸೂಪರ್ ಕಿಂಗ್ಸ್‌ ಪಾಳಯದಲ್ಲೂ ಕೊರೋನಾ ವೈರಸ್ ಭೀತಿ

ನವದೆಹಲಿ: ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೋವಿಡ್-19 ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಚೆನ್ನೈ ಸೂಪರ್ ಕಿಂಗ್ಸ್‌ ಪಾಳಯದಲ್ಲೂ ಕೊರೋನಾ ವೈರಸ್ ಭೀತಿ ಎದುರಾಗಿದೆ.

ಚೆನ್ನೈ ಸೂಪರ್‌ ಕಿಂಗ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಶಿ ವಿಶ್ವನಾಥ್, ಬೌಲಿಂಗ್ ಕೋಚ್ ಲಕ್ಷ್ಮಿಪತಿ ಬಾಲಾಜಿ ಹಾಗೂ ಸಿಎಸ್‌ಕೆ ಬಸ್‌ ಕ್ಲೀನರ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಒಂದು ಸಮಾಧಾನಕರ ಸಂಗತಿಯೆಂದರೆ ಮೇ.02ರಂದು ನಡೆಸಿದ ಕೋವಿಡ್ ಟೆಸ್ಟ್‌ನಲ್ಲಿ ಈ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಆಟಗಾರರ ರಿಪೋರ್ಟ್ ನೆಗೆಟಿವ್ ಬಂದಿದೆ.

ವರುಣ್‌, ಸಂದೀಪ್‌ಗೆ ಕೊರೊನಾ ದೃಢ : ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ಮುಂದೂಡಿಕೆ